December 26, 2024

Newsnap Kannada

The World at your finger tips!

p

ದಸರಾ ಮಹೋತ್ಸವಕ್ಕೆ ರಾಜಮಾತೆಗೆ ಸಚಿವರಿಂದ ಅಧಿಕೃತ ಆಹ್ವಾನ

Spread the love

ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರನ್ನು ಮೈಸೂರಿನ ಅರಮನೆಯಲ್ಲಿ ಭೇಟಿ ಮಾಡಿದ ಸಹಕಾರ ಸಚಿವ, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದರು.


ರಾಜಮಾತೆಗೆ ಫಲಪುಷ್ಪ ತಾಂಬೂಲ ನೀಡಿ ಆಹ್ವಾನಿಸಲಾಯಿತು. ಸಚಿವರ ಆಹ್ವಾನ ಸ್ವೀಕರಿಸಿದ ಪ್ರಮೋದಾದೇವಿ, ದಸರಾ ಅಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ನಂತರ ವರದಿಗಾರರೊಂದಿಗೆ ಮಾತನಾಡಿದ ಸಚಿವರು, ದಸರಾಗೆ ಪೂರ್ಣ ಸಹಕಾರ ನೀಡುವಂತೆ ಕೋರಲಾಯಿತು. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಅರಮನೆಯ ಕಾರ್ಯಕ್ರಮಗಳಿಗೆ ಯಾವುದೇ ಅಡಚಣೆಯಾಗದ ರೀತಿಯಲ್ಲಿ ಸಹಕಾರ ನೀಡುವಂತೆ ಅವರೂ ಕೋರಿದರು. ಅದಕ್ಕೆ ಸಂಪೂರ್ಣ ಸಹಕಾರ ಕೊಡುವುದಾಗಿ ತಿಳಿಸಲಾಗಿದೆ ಎಂದರು.


ಅ.7 ರಿಂದ 15 ರವರೆಗೆ ದಸರಾ ನಡೆಯಲಿದೆ. ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 400 ಜನರಿಗೆ ಅವಕಾಶ ನೀಡಲಾಗಿದೆ. ಚಾಮುಂಡಿಬೆಟ್ಟದಲ್ಲಿ ಯಾವುದೇ ನಿರ್ಬಂಧ ಇಲ್ಲ. ದೇವರ ದರ್ಶನ ಮಾಡುವವರು ಮಾಡಬಹುದು. ಜಂಬೂ ಸವಾರಿ ವೀಕ್ಷಣೆಗೆ 500 ಜನರಿಗೆ ಅವಕಾಶವಿದೆ. ಯಾವ ರೀತಿ ಅವಕಾಶ ಕಲ್ಪಿಸಬೇಕೆಂಬ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸೋಮಶೇಖರ್ ಸ್ಪಷ್ಟಪಡಿಸಿದರು.


ರಾಜಮಾತೆಗೆ ಆಹ್ವಾನ ನೀಡುವ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್. ನಾಗೇಂದ್ರ, ಮೈಸೂರು ಮೇಯರ್ ಸುನಂದಾ ಪಾಲನೇತ್ರ, ಮೂಡಾ ಅಧ್ಯ÷್ಕಕ್ಷ ರಾಜೀವ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪಾಲಿಕೆ ಆಯುಕ್ತ ಜಿ. ಲಕ್ಷ್ಮೀಕಾಂತ್ ರೆಡ್ಡಿ, ಮೈಸೂರು ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ ಮತ್ತಿತರರು ಇದ್ದರು.

Copyright © All rights reserved Newsnap | Newsever by AF themes.
error: Content is protected !!