ದಸರಾ ಹಿನ್ನೆಲೆಯಲ್ಲಿ ಅಕ್ಟೋಬರ್7 ರಿಂದ 15 ರ ತನಕ ದೀಪಾಲಂಕಾರಗಳೊಂದಿಗೆ ಮೈಸೂರು ರೈಲ್ವೆ ವಸ್ತುಸಂಗ್ರಹಾಲಯದ ಕೆಲಸದ ಸಮಯವನ್ನು ರಾತ್ರಿ 8 ರ ವರೆಗೆ ವಿಸ್ತರಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಮೈಸೂರು ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಡಾ. ಮಂಜುನಾಥ್ ಕನಮಡಿ ತಿಳಿಸಿದ್ದಾರೆ.
ರೈಲ್ವೆ ವಸ್ತುಸಂಗ್ರಹಾಲಯದ ಎಲ್ಲ ವಿಂಟೇಜ್ ಸ್ಟೀಮ್ ಲೋಕೋಮೋಟಿವ್‌ಗಳು, ಕೋಚ್‌ಗಳು, ತಪಾಸಣಾ ಗಾಡಿಗಳು, ಸರಕು ವ್ಯಾಗನ್‌ಗಳು, ಕ್ರೇನ್,ಆಟಿಕೆ ರೈಲು ಮತ್ತು ಇತರ ಎಲ್ಲ ಹೊರಾಂಗಣ ಪ್ರದರ್ಶನದ ವಸ್ತುಗಳನ್ನು ಪ್ರವಾಸಿಗರಿಗೆ ಅದ್ಭುತ ಅನುಭವ ನೀಡಲು ದೀಪಗಳಿಂದ ಅಲಂಕೃತಗೊಳಿಸಲಾಗುತ್ತದೆ. ಸಾರ್ವಜನಿಕರ ಅನುಕೂಲಕ್ಕಾಗಿ ಅ. 12 (ಮಂಗಳವಾರ) ರಂದು ವಾರದ ರಜೆ ಇರುವುದಿಲ್ಲ.
ಪ್ರವಾಸಿಗರು ಯಾವುದೇ ಕೈಚೀಲಗಳು, ಬ್ಯಾಕ್‌ಪ್ಯಾಕ್‌ಗಳನ್ನು ವಸ್ತುಸಂಗ್ರಹಾಲಯದ ಆವರಣಕ್ಕೆ ಕೊಂಡೊಯ್ಯಲು ಅವಕಾಶವಿಲ್ಲ. ಹೊರಗಿನಿಂದ ತಂದ ಆಹಾರ, ಪಾನೀಯಗಳ ಸೇವನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸ್ವಾಗತ ಕೌಂಟರ್‌ನಲ್ಲಿ ನಿಗದಿತ ಶುಲ್ಕ ಪಾವತಿಸಿದ ನಂತರ ಎಸ್‌ಎಲ್‌ಆರ್, ಡಿಎಸ್‌ಎಲ್‌ಆರ್‌ನೊಂದಿಗೆ ಸ್ಥಿರ ಛಾಯಾಗ್ರಹಣಕ್ಕೆ ಅವಕಾಶ ನೀಡಲಾಗುವುದು.
ಸಂದರ್ಶಕರು ಕೋವಿಡ್ ಸಂಬಂಧಿತ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್ವಾಲ್ ಮನವಿ ಮಾಡಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು