ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಸಂಚಾರ ಮಾಡುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿಯಾಗಿ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ಮೈಸೂರಿನ ಬಂಬೂ ಬಜಾರ್ ಬಳಿ ನಡೆದಿದೆ.
ದ್ವಿಚಕ್ರ ವಾಹನಕ್ಕೆ ಸಚಿವರಿದ್ದ ಸರ್ಕಾರಿ ಕಾರು ಡಿಕ್ಕಿಯಾಗಿತ್ತು. ಆದರೆ ಈ ವೇಳೆ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸದೆ ಸಚಿವರ ಕಾರಿನ ಮೇಲಿದ್ದ ಬಾವುಟ ತೆಗೆಯಲು ಸಿಬ್ಬಂದಿ ಮುಂದಾಗಿದ್ದರು ಎನ್ನಲಾಗಿದೆ.
ಸ್ಥಳೀಯರು ಸಚಿವರು ಹಾಗೂ ಕಾರು ಚಾಲಕನಿಗೆ ತರಾಟೆಗೆ ತೆಗೆದುಕೊಂಡಿದ್ದು, ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಏರ್ಪಟ್ಟಿತ್ತು.
ಈ ಹಂತದಲ್ಲಿ ಮಧ್ಯ ಪ್ರವೇಶಿದ ಪೊಲೀಸರು ಕೂಡ ಕಾರನ್ನು ಸುರಕ್ಷಿತವಾಗಿ ಕಳುಹಿಸಲು ಮುಂದಾಗಿದ್ದರು.
ಇದರಿಂದ ಮತ್ತಷ್ಟು ಅಸಮಾಧಾನಗೊಂಡ ಸ್ಥಳೀಯರು ಪೊಲೀಸರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಸಚಿವರ ಜೊತೆಯೇ ಸ್ಥಳೀಯರು ಮಾತಿನ ಚಕಮಕಿ ನಡೆಸಿದ್ದು, ಪೊಲೀಸರು, ಸಚಿವರು ಹಾಗೂ ಸಿಬ್ಬಂದಿಗಳ ವರ್ತನೆಗೆ ಗರಂ ಆಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕೊನೆಗೆ ಗಾಯಾಳು ಸವಾರನನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ