ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎನ್ನುವ ಮೂಢ ನಂಬಿಕೆಯನ್ನು ಧಿಕ್ಕರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಚಾಮರಾಜನಗರಕ್ಕೆ ಭೇಟಿ ನೀಡಲಿದ್ದಾರೆ.
ಬೊಮ್ಮಾಯಿ ಇಂದು ಮತ್ತು ನಾಳೆ (ಅ. 6 ಮತ್ತು7) ಎರಡು ದಿನಗಳ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಮೈಸೂರು ತೆರಳಲಿದ್ದಾರೆ. ಸಂಜೆ 4 ಗಂಟೆಗೆ ಮೋದಿ ಯುಗ್ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಗುರುವಾರ ಬೆಳಗ್ಗೆ ಚಾಮುಂಡಿ ದೇವಿಯ ದರ್ಶನ ಪಡೆಯಲಿದ್ದು, ದಸರಾ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ.
ಗುರುವಾರ ಬೆಳಗ್ಗೆ 10.40 ಕ್ಕೆ ಮೈಸೂರು ವಿಮಾನನಿಲ್ದಾಣದಲ್ಲಿ ರಾಷ್ಟ್ರಪತಿಗಳನ್ನು ಬರಮಾಡಿಕೊಂಡು ಆನಂತರ 3.30 ಕ್ಕೆ ಚಾಮರಾಜನಗರದಲ್ಲಿ 450 ಹಾಸಿಗೆಗಳ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಅಲ್ಲದೆ 4.40 ಕ್ಕೆ ರಾಷ್ಟ್ರಪತಿಗಳನ್ನು ಬೀಳ್ಕೊಡಲಿದ್ದಾರೆ. ನಂತರ ರಾತ್ರಿ 8 ಗಂಟೆಗೆ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು