ಮಂಗಳೂರಿನ ಕೊಲೊಸೊ ಆಸ್ಪತ್ರೆಯ ಹಾಸ್ಟೇಲ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದ್ದಾಳೆ.
ಕಾಲೇಜಿನಿಂದ ಫೀಸ್ ಕಟ್ಟಲು ಒತ್ತಡ ಹಾಕುತ್ತಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.
ಕೇರಳದ ಕಾಸರಗೋಡು ಮೂಲದ ವಿದ್ಯಾರ್ಥಿನಿ ಮಂಗಳೂರಿನ ಕದ್ರಿ ಬಳಿಯ ಕೊಲಾಸೊ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದಳು.
ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು, ಮಂಗಳವಾರ ಹಾಸ್ಟೆಲ್ ನ ಬಾತ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಳು. ಬಳಿಕ ವಿದ್ಯಾರ್ಥಿನಿಯನ್ನು ರಕ್ಷಿಸಿ, ಮಂಗಳೂರಿನ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾಳೆ.
ಕಾಲೇಜಿನಲ್ಲಿ ಫೀಸ್ ಕಟ್ಟಲು ಒತ್ತಡ ಹೆಚ್ಚಾದ ಹಿನ್ನೆಲೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಫೀಸ್ ಕಟ್ಟುವ ವಿಚಾರದಲ್ಲಿ ಕಾಲೇಜಿನಿಂದ ಕಿರುಕುಳ ನೀಡಲಾಗುತ್ತಿತ್ತು ಎಂಬ ಶಂಕೆ ಸಹ ವ್ಯಕ್ತವಾಗಿದೆ.
ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
More Stories
ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ