ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಮಾಹಾ ಮಳೆಗೆ ಮನೆ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ. ಮೂರು ಮಂದಿಯನ್ನು ಈ ದುರಂತದಲ್ಲಿ ರಕ್ಷಣೆ ಮಾಡಲಾಗಿದೆ.
ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆಗೆ ಈ ಮನೆ ಕುಸಿದು ಬಿದ್ದಿದೆ.
ಈ ಮಹಾ ಮಳೆಗೆ ಮನೆ ಕುಸಿದಿದ್ದರಿಂದ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.
ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಈ ದುರ್ಘಟನೆ ನಡೆದದೆ.
ಮೃತರೆಲ್ಲರೂ ಭೀಮಪ್ಪಾ ಖನಗಾವಿ ಕುಟುಂಬದ ಸದಸ್ಯರಾಗಿದ್ದಾರೆ. ಮೃತರನ್ನು ಗಂಗವ್ವ ಖನಗಾವಿ (50), ಸತ್ಯವ್ವ ಖನಗಾವಿ (45), ಪೂಜಾ ಖನಗಾವಿ (8), ಸವಿತಾ ಖನಗಾವಿ (28), ಲಕ್ಷ್ಮೀ ಖನಗಾವಿ (15), ಅರ್ಜುನ್ ಖನಗಾವಿ, ಕಾಶವ್ವ ಕೊಳೆಪ್ಪನವರ್ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಹಿರೇಬಾಗೇ ವಾಡಿ ಪೋಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸ್ಥಳಕ್ಕೆ ಧಾವಿಸಿದ್ದಾರೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು