ಅಫ್ಘಾನಿಸ್ತಾನದ ಕುಂಡುಜ್ ಪ್ರಾಂತ್ಯದ ಸಯ್ಯದ್ ಅಬಾದ್ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಸಲ್ಲಿಸುವ ವೇಳೆ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ.
ಈ ದುರಂತದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆಸ್ಫೋಟಸಂಭವಿಸಿದ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.
ಸ್ಫೋಟದ ತೀವ್ರತೆಗೆ ಹತ್ತಾರು ಜನರ ದೇಹಗಳ ಛಿದ್ರಛಿದ್ರವಾಗಿದ್ದು ಗುರುತು ಪತ್ತೆಹಚ್ಚುವುದು ಸವಾಲಿನ ಕೆಲಸ ಎಂದು ಹೇಳಲಾಗಿದೆ.
ಈವರೆಗೆ ದಾಳಿಯ ಹಿಂದಿನ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.
ಇತ್ತೀಚೆಗೆ ಕಾಬೂಲ್ ಏರ್ಪೋರ್ಟ್ನಲ್ಲಿ ಇಸ್ಲಾಮಿಕ್ ಸ್ಟೇಟ್ಸ್ ಖೊರಾಸನ್ ಪ್ರಾಂತ್ಯ ಆತ್ಮಾಹುತಿ ದಾಳಿ ನಡೆಸಿತ್ತು. ಈಗಿನ ದಾಳಿಯನ್ನೂ ಅದೇ ಉಗ್ರ ಸಂಘಟನೆ ಕೈವಾಡ ಇದೆ ಎಂದು ಶಂಕಿಸಲಾಗಿದೆ.
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
More Stories
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು