ಪಾಕಿಸ್ತಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸರ್ಜಿಕಲ್ ಸ್ಟ್ರೈಕ್ ಮಾಡುವ ವಾರ್ನಿಂಗ್ ಕೊಟ್ಟಿದ್ದಾರೆ.
ಕಾಶ್ಮೀರದಲ್ಲಿ ನಾಗರಿಕರ ಹತ್ಯೆಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ತನ್ನ ಅಕ್ರಮಗಳನ್ನು ನಿಲ್ಲಿಸದಿದ್ದರೆ ಸರ್ಜಿಕಲ್ ಸ್ಟ್ರೈಕ್ ಮಾಡ್ತೀವಿ. ಹಿಂದಿನ ಸರ್ಜಿಕಲ್ ಸ್ಟ್ರೈಕ್ನಿಂದ ನಿಮಗೆ ನಮ್ಮ ಶಕ್ತಿ ತಿಳಿದಿದೆ ಎಂದಿದ್ದಾರೆ.
ನಾವು ದಾಳಿಗಳನ್ನು ಸಹಿಸುವುದಿಲ್ಲ ಎಂಬುದಕ್ಕೆ ಇವು ಸಾಕ್ಷಿ. ಹೀಗೆ ನಿಮ್ಮ ಆಟ ಮುಂದುವರೆದರೆ ಇನ್ನಷ್ಟು ಸರ್ಜಿಕಲ್ ಸ್ಟ್ರೈಕ್ ನಡೆಯುತ್ತವೆ ಎಂದು ಅಮಿತ್ ಶಾ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಗೋವಾದ ಧರ್ಬಂದೋರಾದಲ್ಲಿ ಸಮಾರಂಭದಲ್ಲಿ ಮಾತನಾಡಿದ ಅಮಿತ್ ಶಾ.. ಮೋದಿ, ಮನೋಹರ್ ಪರಿಕ್ಕರ್ ನೇತೃತ್ವದಲ್ಲಿ ಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು. ಆ ಒಂದು ಸರ್ಜಿಕಲ್ ಸ್ಟ್ರೈಕ್ ಭಾರತದ ಮಹತ್ವದ ಹೆಮ್ಮೆಯ ಹೆಜ್ಜೆ. ನಮ್ಮ ಗಡಿಯನ್ನು ಮುಟ್ಟಿದ್ರೆ ಏನಾಗುತ್ತೆ ಎಂಬುದಕ್ಕೆ ಆ ಮೂಲಕ ಸಂದೇಶ ರವಾನೆ ಮಾಡಿದ್ದೇವೆ. ಆಗ ಮಾತುಕತೆಗೆ ಸಮಯವಿತ್ತು, ಈಗ ಪ್ರತ್ಯುತ್ತರ ನೀಡುವ ಸಮಯ ಬಂದಿದೆ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ