ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರಲ್ಲಿ ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ
ಡಿಕೆಶಿ ‘ಅಲಿಬಾಬಾ ಮತ್ತು ನಲವತ್ತು ಕಳ್ಳರು’ ಎಂಬ ರೀತಿಯಲ್ಲಿ ಇದ್ದಾರೆ ರಂದು ಕಿಡಿಕಾರಿದರು.
ತುಮಕೂರಿನಲ್ಲಿ ಸುದ್ದಿಗಾರರ ಜೊತ ಮಾತನಾಡಿದ ಸೊಗಡು ಶಿವಣ್ಣ, ಡಿ.ಕೆ. ಶಿವಕುಮಾರ್, ಲಕ್ಷ್ಮಿ ಹೆಬ್ಬಾಳಕರ್ ಹೆಸರಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ತಾಲೂಕಿನಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಹೆಸರಲ್ಲಿ ಬೇನಾಮಿ ಜಮೀನು ಖರೀದಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅವರ ಬಗ್ಗೆ ನಾವೇನು ಹೇಳೋದು ಬೇಕಿಲ್ಲ. ಅವರ ಬಗ್ಗೆ ಕಾಂಗ್ರೆಸ್ನವರೇ ಜಗಜ್ಜಾಹೀರು ಮಾಡುತ್ತಿದ್ದಾರೆ ಎಂದರು
ಪಾವಗಡ ಸೋಲಾರ್ ಪಾರ್ಕ್ನಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ. ಶಿವಕುಮಾರ್ ವಿರುದ್ದ ಸಿಬಿಐ ತನಿಖೆಯಾಗಬೇಕು. ಅವರು ಅಲಿಬಾಬಾ ಗ್ಯಾಂಗಿನ ರೀತಿ ಡಕಾಯತಿ ಮಾಡುತ್ತಿದ್ದಾರೆ, ಈ ಡಕಾಯತನಿಗೆ ಇತರೆ 40 ಕಳ್ಳರು ಸಪೋರ್ಟ್ ಮಾಡುತ್ತಿದ್ದಾರೆ. ಅವ್ರು ಸಾವಿರಾರು ಕೋಟಿ ರೂಪಾಯಿಗಳನ್ನು ಸೋಲಾರ್ ಪಾರ್ಕ್ನ ಹೆಸರಿನಲ್ಲಿ ಗುಳುಂ ಮಾಡಿದ್ದಾರೆ. ರಿಟೇಲ್ ಅಲ್ಲ ವೋಲ್ಸೇಲ್ ಎಂದು ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದಾರೆ.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು