ಎಲೆಕ್ಟ್ರಿಕ್ ಬೈಕ್ ಚಾರ್ಜಿಂಗ್ ಸ್ಟೇಷನ್ ತೆರೆಯಲು ಬೆಸ್ಕಾಂ (BESCOM )ಆಲೋಚನೆ ನಡೆಸಿದೆ.
ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ದಿನದಿಂದ ದಿನಕ್ಕೆ ಗಗನ್ನಕ್ಕೇರುತ್ತಿದ್ದು ವಾಹನ ಸವಾರರನ್ನು ಸಂಕಷ್ಟಕ್ಕೆ ತಳ್ಳಿದೆ. ಪೆಟ್ರೋಲ್ ಬೆಲೆ ಏರುತ್ತಿದ್ದಂತೆ ಭವಿಷ್ಯದ ವಾಹನಗಳೆಂದು ಕರೆಯಿಸಿಕೊಳ್ಳುತ್ತಿರುವ ವಿದ್ಯುತ್ ಚಾಲಿತ (ಎಲೆಕ್ಟ್ರಿಕ್ ಬೈಕ್) ಬೈಕ್ಗಳು ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ.
ಜನರು ಪೆಟ್ರೋಲ್ ಬೆಲೆ ಏರಿಕೆಯಿಂದ ಬಚಾವ್ ಆಗಲು ಪ್ರಸ್ತುತ ದಿನಗಳಲ್ಲಿ ಎಲೆಕ್ಟ್ರಿಕ್ ಬೈಕ್ ಮೊರೆ ಹೋಗಿದ್ದಾರೆ.
ದಿನ ಕಳೆದಂತೆ ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಗಳ ಸಂಖ್ಯೆ ಹೆಚ್ಚುತ್ತಿದೆ. ಆದರೆ ಬೈಕ್ ಗಳ ಜೊತೆ ಚಾರ್ಜಿಂಗ್ ಪಾಯಿಂಟ್‌ಗಳು ಲಭ್ಯವಿಲ್ಲದೆ ಸವಾರರು ಕಿರಿಕಿರಿ ಅನುಭವಿಸುಂತಾಗಿದೆ.
ಚಾರ್ಜಿಂಗ್ ಪಾಯಿಂಟ್ ಸ್ಥಾಪಿಸಲು ಬೆಸ್ಕಾಂ ಚಿಂತನೆ ಸಾರ್ವಜನಿಕ ಪ್ರದೇಶಗಳಲ್ಲಿ ಇರುವಂತೆ ಅಪಾರ್ಟ್ಮೆಂಟ್ಗಳಲ್ಲಿಯೂ ಚಾರ್ಜಿಂಗ್ ಪಾಯಿಂಟ್ ಸ್ಥಾಪಿಸುವ ಬಗ್ಗೆ ಬೆಸ್ಕಾಂ ಚಿಂತನೆ ನಡೆಸುತ್ತಿದೆ.
ಬೆಸ್ಕಾಂ ಎಂಡಿ ರಾಜೇಂದ್ರ ಚೋಳನ್ ‘ಬೆಸ್ಕಾಂ ವತಿಯಿಂದ ಚಾರ್ಜಿಂಗ್ ಪಾಯಿಂಟ್ ಸ್ಥಾಪನೆ ಮಾಡುವುದರಿಂದ ಆದಾಯವೂ ಹೆಚ್ಚುತ್ತದೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸಿದಂತೆಯೂ ಆಗುತ್ತೆ . ಈ ಕುರಿತು ಈಗಾಗಲೇ ಅಪಾರ್ಟ್ಮೆಂಟ್ ಅಸೋಸಿಯೇಷನ್ ಜತೆ ಮಾತುಕತೆ ನಡೆಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಜಾರಿಗೆ ತರಲಿದ್ದೇವೆ’ ಎಂದಿದ್ದಾರೆ.
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
- ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ
More Stories
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ