February 26, 2026

Newsnap Kannada

The World at your finger tips!

katil

ಸಿದ್ದು- ಡಿಕೆಶಿ ಜೋಡೆತ್ತಲ್ಲ – ಕಾಡೆತ್ತು : ನಳೀನ್ ಕುಮಾರ್ ಕಟೀಲ್

Spread the love

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೋಡೆತ್ತಲ್ಲ ಅವರು ಕಾಡೆತ್ತು ಆಗಿದ್ದಾರೆ. ಹೀಗಾಗಿ ಅವರು ಒಬ್ಬರಿಗೊಬ್ಬರು ಕಾದಾಟ ಶುರು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ವ್ಯಂಗ್ಯವಾಡಿದರು.

ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಪ್ರಧಾನಿ ಸಬ್ ಕಾ ಸಾತ್ ಸಬ್ ವಿಕಾಸ್ ಅಂದ್ರೆ, ಸಿದ್ದರಾಮಯ್ಯ ನವರದ್ದು ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್ ಆಗಿದೆ. ಇದೀಗ ಅವರಿಗೆ ಸೋಲೋ ಭೀತಿ ಶುರುವಾಗಿದೆ. ಅದಕ್ಕಾಗಿ ಅಲ್ಪಸಂಖ್ಯಾತ ಓಲೈಕೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸಂವಿಧಾನದ ಮೇಲಿನ ನಂಬಿಕೆ ಕಳೆದುಕೊಂಡಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಯಾರು ಹೇಳಿ ಪ್ರಶ್ನಿಸಿದ ಕಟೀಲ್ ಅವರು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೇ ಅಧ್ಯಕ್ಷಗಿರಿಗೆ ಪೈಪೋಟಿ ಮಾಡುತ್ತಿದ್ದಾರೆ. ಅವರಿಗೆ ಪಕ್ಷವೇ ಮುನ್ನೆಡಿಸೋಕೆ ಆಗುತ್ತಿಲ್ಲ ದೇಶ ಮುನ್ನಡೆಸುತ್ತಾರಾ, ರಾಹುಲ್ ಗಾಂಧಿ ಒರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತ ವರದಿ ಇವೆ ಎಂದು ರಾಹುಲ್ ವಿರುದ್ದ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷವು ಮುಂದಿನ ಚುನಾವಣೆಗೆ ಒಟ್ಟಾಗಿ ಹೋಗಲ್ಲ. ಮುಂದಿನ ಚುನಾವಣೆ ವೇಳೆ ಕಾಂಗ್ರೆಸ್ ಎರಡು ಹೋಳಾಗಿ ಹೋಗುತ್ತದೆ. ಜೆಡಿಎಸ್ ಕುಟುಂಬ ರಾಜಕೀಯ ಮಾಡುತ್ತಿದೆ. ಹೀಗಾಗಿ ಮುಂದಿನ ಚುನಾವಣೆಗೆ ಎರಡು ಪಕ್ಷ ಹೋಗುತ್ತವೆ ಎಂದರು.

error: Content is protected !!