ಖಡಕ್ ಅಧಿಕಾರಿಯ ನೇಮಕಕ್ಕೆ ತಡೆ ಹಿಡಿದ ಸರ್ಕಾರ ಮಂಡ್ಯ ರಾಜಕಾರಣಿಗಳು ಒತ್ತಡಕ್ಕೆ ಮಣಿದು ಎಸ್ಪಿ ಸುಮನ್ ಡಿ ಪೆನ್ನೇಕರ್ ಮಂಡ್ಯಕ್ಕೆ ಬರುವುದನ್ನು ತಡೆಯುವ ಕುತಂತ್ರ ವ್ಯವಸ್ಥಿತವಾಗಿ ನಡೆದಿದೆ.
ಮಂಡ್ಯ ನೂತನ ಎಸ್ಪಿಯಾಗಿ ಸುಮನ್ ಡಿ ಪೆನ್ನೇಕರ್ ಇಂದು ಅಧಿಕಾರ ವಹಿಸಿಕೊಳ್ಳಬೇಕಿತ್ತು. ಆದರೆ ದಕ್ಷ ಅಧಿಕಾರಿ ಸುಮನ್ ಆಗಮನಕ್ಕೆ ಬೆದರಿದ ಮಂಡ್ಯ ರಾಜಕಾರಣಿಗಳು ಈ ವರ್ಗಾವಣೆ ರದ್ದು ಮಾಡಿ, ಹೊಂದಾಣಿಕೆ ಮಾಡಿಕೊಂಡು ಹೋಗುವ ಅಧಿಕಾರಿಯೊಬ್ಬರನ್ನು ನೇಮಕ ಮಾಡಿಸುವ ಹುನ್ನಾರ ನಡೆಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಅಧಿಕಾರ ಸ್ವೀಕರಿಸಬೇಕಿದ್ದ ಸುಮನ್ ಗೆ ಇನ್ನೂ 2 ದಿನ ಅಧಿಕಾರ ವಹಿಸಿಕೊಳ್ಳದಂತೆ ಸರ್ಕಾರದ ಡಿಪಿಎಆರ್ ವಿಭಾಗ ಮೌಖಿಕ ಸೂಚನೆ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ರಾಜ್ಯ ಸರ್ಕಾರ ನಿನ್ನೆಯಷ್ಟೇ ಆಡಳಿತ ದೃಷ್ಟಿಯಿಂದ 9 ಮಂದಿ ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿತ್ತು. ಅದರಲ್ಲಿ ಮಂಡ್ಯ ಎಸ್ಪಿ ಸ್ಥಾನ ಕೂಡಾ ಒಂದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು