ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ಹರಾಜಿಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಸಾವ೯ಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಸ್‍ಪಿ ಅವರನ್ನು ವರ್ಗಾವಣೆ ಮಾಡಿ ಒಂದು ವಾರ ಕಳೆದರೂ ಬೇರೆ ಎಸ್‍ಪಿ ನೇಮಕ ಮಾಡದೆ ಹುದ್ದೆ ಖಾಲಿ ಉಳಿದಿದೆ.
ಮಂಡ್ಯ ಎಸ್‍ಪಿ ಹುದ್ದೆ ಹರಾಜಿಗಿದೆ. ಹೆಚ್ಚು ಬಿಡ್ ಕೂಗಿದವರಿಗೆ ಸರ್ಕಾರ ಆದೇಶ ಬರಲಿದೆ. ಭ್ರಷ್ಟ ಕೆಎಸ್‍ಪಿಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೆ ಸುವರ್ಣಾವಕಾಶ ಎಂಬ ಪೋಸ್ಟ್ ಹರಿದಾಡುತ್ತಿದೆ.
ಕಳೆದ ಅ.20 ರಂದು ಎಸ್‍ಪಿಯಾಗಿದ್ದ ಡಾ.ಎಂ.ಅಶ್ವಿನಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಅವರ ಜಾಗಕ್ಕೆ ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿದ್ದ ಸುಮನ್ ಡಿ.ಪನ್ನೇಕರ್ ಅವರನ್ನು ನೇಮಿಸಿತ್ತು.
ಆದರೆ ಅಧಿಕಾರ ಪಡೆಯುವ ಮುನ್ನವೇ ಗೃಹ ಇಲಾಖೆ ತಡೆ ನೀಡಿತ್ತು. ಆದರೆ ಅಶ್ವಿನಿ ಅ.21ರಂದೇ ಎಎಸ್‍ಪಿ ವಿ.ಧನಂಜಯ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು