ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನ ಸುದ್ದಿ ತಿಳಿದು ಆಘಾತಗೊಂಡ ಅಭಿಮಾನಿಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮರೂರು ಗ್ರಾಮದ ಮುನಿಯಪ್ಪ(30) ಮೃತರು.
ಶುಕ್ರವಾರ ಬೆಳಗ್ಗೆ ಪುನೀತ್ ರಾಜ್ಕುಮಾರ್ ಅವರಿಗೆ ಹೃದಯಾಘಾತ ವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಮುನಿಯಪ್ಪ ಆಘಾತಗೊಂಡಿದ್ದರು. ಮುನಿಯಪ್ಪ ಕಣ್ಣೀರು ಹಾಕುತ್ತಾ ಕುಸಿದರು. ಅತ್ತ ಅಪ್ಪು ಇನ್ನಿಲ್ಲ ಎಂಬ ಸುದ್ದಿ ಬರುತ್ತಿದ್ದಂತೆ ಮುನಿಯಪ್ಪಗೆ ಎದೆನೋವು ಕಾಣಿಸಿಕೊಂಡಿತು. ಕೆಲವೇ ಕ್ಷಣದಲ್ಲಿ ಪ್ರಾಣಪಕ್ಷಿ ಹಾರಿಹೋಗಿದೆ.
7 ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಮುನಿಯಪ್ಪ, ಕರೊನಾ ಹಿನ್ನೆಲೆ ಮರೂರು ಗ್ರಾಮದಲ್ಲಿ ವಾಸವಿದ್ದ.
ಪುನೀತ್ ಅವರ ಪ್ರತಿಯೊಂದು ಸಿನಿಮಾವನ್ನು ತಪ್ಪದೇ ನೋಡುತ್ತಿದ್ದ ಮುನಿಯಪ್ಪ, ಆಗಾಗ್ಗೆ ಬೆಂಗಳೂರಿಗೆ ತೆರಳಿ ನೆಚ್ಚಿನ ನಟನನ್ನು ಭೇಟಿಯಾಗುತ್ತಿದ್ದರು. ಮುನಿಯಪ್ಪ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು