ಹೃದಯಾಘಾತದಿಂದ ನಿಧರಾದ ಪವರ್ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ರಾಜ್ಯ ಸರ್ಕಾರ ಮರಣೋತ್ತರವಾಗಿ ರಾಜ್ಯೋತ್ಸವ ಪ್ರಶಸ್ತಿ ನೀಡಲು ಚಿಂತನೆ ನಡೆದಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಪುನೀತ್ ರಾಜ್ಕುಮಾರ್ಗೆ ಮರಣೋತ್ತರವಾಗಿ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶಿಫಾರಸು ಮಾಡಿದ್ದಾರೆ
ಆದರೆ ಈ ಶಿಫಾರಸು ನ್ಯಾ.ನಾಗ್ಮೋಹನ್ದಾಸ್ ಸಮಿತಿ ನೀಡಿರುವ ವರದಿಗೆ ವಿರೋಧವಾಗಿದೆ ಎನ್ನಲಾಗಿದೆ.
ನ್ಯಾಯಮೂರ್ತಿ ನಾಗ್ಮೋಹನ್ ದಾಸ್ ಸಮಿತಿ ನೀಡಿರುವ ವರದಿಯಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಬಾರದೆಂದು ಹೇಳಲಾಗಿದೆ.
ಆದರೆ ಇದೀಗ ಪುನೀತ್ ರಾಜ್‍ಕುಮಾರ್ ಅವ್ರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡುವ ಕುರಿತು ಉನ್ನತ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ.
ಈ ಕುರಿತು ಸಿಎಂ ಬೊಮ್ಮಾಯಿ ಬಳಿ ಮಾತನಾಡಿರುವ ಸಚಿವರು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳೋದಾಗಿ ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಮರಣೋತ್ತರವಾಗಿ ರಾಜ್ಯೋತ್ಸವ ಪ್ರಶಸ್ತಿ ನೀಡುವುದಾಗಿ ನಿರ್ಧರಿಸಿದರೆ ಮರಣೋತ್ತರ ರಾಜ್ಯೋತ್ಸವ
ಪ್ರಶಸ್ತಿ ಪಡೆದ ಮೊದಲ ನಟನಾಗಲಿದ್ದಾರೆ ಪುನೀತ್ ರಾಜ್‍ಕುಮಾರ್.
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
More Stories
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ