ಪವರ್ಸ್ಟಾರ್ ಪುನೀತ್ ಹಠಾತ್ ನಿಧನದ ಆಘಾತಕ್ಕೆ ಮತ್ತೊಬ್ಬ ಅಭಿಮಾನಿ ಸಾವನ್ನಪ್ಪಿದ್ದಾನೆ. ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದ ಕೆ.ಎಂ.ರಾಜೇಶ್ (50) ಮೃತಪಟ್ಟ ಅಭಿಮಾನಿ.
ಮೃತ ರಾಜೇಶ್ ಅಪ್ಪುವಿನ ಅಪ್ಪಟ ಅಭಿಮಾನಿಯಾಗಿದ್ದು ಪುನೀತ್ ನಿಧನದ ಬಳಿಕ ಸರಿಯಾಗಿ ಊಟ, ಉಪಹಾರ ತ್ಯಜಿಸಿದ್ದನಂತೆ. ನಿನ್ನೆ ಅಪ್ಪು ಅಂತಿಮ ದರ್ಶನಕ್ಕೆ ಹೋಗುವುದಾಗಿ ಮನೆ ಬಿಟ್ಟಿದ್ದ ರಾಜೇಶ್ ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ಬಳಿ ಸುಸ್ತಾಗಿ ಬಿದ್ದಿದ್ದರು.
ಈ ವೇಳೆ ರಸ್ತೆಯಲ್ಲಿ ಬಿದ್ದಿದ್ದ ರಾಜೇಶ್ ರನ್ನು ಪರಿಚಯಸ್ಥರು ನೋಡಿ ಮನೆಗೆ ಕರೆದುಕೊಂಡು ಹೋಗಿ ವೈದ್ಯರಿಂದ ಚಿಕಿತ್ಸೆಯನ್ನೂ ಕೊಡಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಅಭಿಮಾನಿ ಕೊನೆಯುಸಿರೆಳೆದಿದ್ದಾನೆ.

ಈ ಮೂಲಕ ಮಂಡ್ಯದಲ್ಲಿ ಪುನೀತ್ ಅಭಿಮಾನಿಗಳ ಸಾವಿನ ಸಂಖ್ಯೆ ಎರಡಕ್ಕೇರಿದೆ. ಇನ್ನು ಡಾ.ರಾಜ್ ಕುಟುಂಬದ ಅಪ್ಪಟ ಅಭಿಮಾನಿಯಾಗಿದ್ದ ರಾಜೇಶ್ ಅಣ್ಣಾವ್ರ ಮೇಲಿನ ಅಪಾರ ಅಭಿಮಾನದಿಂದ ತಮ್ಮ ಹೋಟೆಲ್ಗೆ ಡಾ.ರಾಜ್ ಕುಮಾರ್ ಹೋಟೆಲ್ ಎಂದು ಹೆಸರಿಟ್ಟಿದ್ದರು..
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು