ನಟ ಪುನೀತ್ ರಾಜ್‍ಕುಮಾರ್ ಅವರಂತೆಯೇ ನಿಧನ ನಂತರ ತಾನೂ ನೇತ್ರ ದಾನ ಮಾಡುವುದಕ್ಕಾಗಿ ಅಭಿಮಾನಿಯೊಬ್ಬ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಶ್ಯಾನುಬೋಗನಹಳ್ಳಿಯ ರಾಜೇಂದ್ರ (40) ನೇಣಿಗೆ ಶರಣಾದ ಅಭಿಮಾನಿ.
ಪುನೀತ್ ರಾಜಕುಮಾರರಂತೆಯೇ ತನ್ನ ಕಣ್ಣನ್ನು ದಾನ ಮಾಡಿ ಎಂದು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಭಾನುವಾರ ಸಂಜೆ ಸಾವನ್ನಪ್ಪಿದ ರಾಜೇಂದ್ರನ ಮೃತದೇಹವನ್ನು ಕಂಡ ಸಂಬಂಧಿಗಳು ವಿಷಯವನ್ನು ಬಹಿರಂಗ ಪಡಿಸಿದ್ದಾರೆ.
ನಟ ಪುನೀತ್ ಸಾವಿನಿಂದ ಕಂಗಾಲಾಗಿದ್ದ ರಾಜೇಂದ್ರ, ಇದೇ ದುಃಖದಲ್ಲಿ ಪುನೀತ್ ಕಣ್ಣು ದಾನ ಮಾಡಿದ್ದನ್ನು ಆದರ್ಶವಾಗಿ ತೆಗೆದುಕೊಂಡು ವಿಷಯವನ್ನು ಮನೆಯವರಿಗೆ ತಿಳಿಸುತ್ತಲೇ ಇದ್ದ. ವರ್ಷದ ಹಿಂದೆ ಮದುವೆಯಾಗಿದ್ದ ರಾಜೇಂದ್ರ ತಮ್ಮ ನೆಚ್ಚಿನ ನಾಯಕನ ಮಾದರಿಯನ್ನು ಜೀವಂತವಾಗಿಡಲು ಜೀವ ಬಿಟ್ಟಿದ್ದಾನೆ ಎಂದು ಸಹೋದರ ಲೋಹಿತ್ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ