ಹಾನಗಲ್ ವಿಧಾನಸಭೆಯ ಉಪಚುನಾವಣೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿಗೆ ಭಾರೀ ಮುಖಭಂಗವಾಗಿದೆ
ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಜಯಭೇರಿ ಸಾಧಿಸಿದ್ದಾರೆ.
ಸಿಎಂ ಉದಾಸಿ ನಿಧನ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಅವರ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶಿವರಾಜ್ ಸಜ್ಜನರ್ ಅವರನ್ನು ಕಣಕ್ಕೆ ಇಳಿಸಲಾಗಿತ್ತು. ಜೆಡಿಎಸ್ ನಿಯಾಜ್ ಶೇಕ್ ಅವರನ್ನ ಕಣಕ್ಕೆ ಇಳಿಸಿತ್ತು.
ಒಟ್ಟು 19 ಸುತ್ತಿನ ಮತ ಏಣಿಕೆ ಕಾರ್ಯ ನಡೆದಿದೆ. ಪ್ರತಿ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವನ್ನು
ತಮ್ಮದಾಗಿಸಿಕೊಂಡಿದ್ದಾರೆ.
13ನೇ ಸುತ್ತು ಮುಕ್ತಾಯಕ್ಕೆ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 59,985 ಮತಗಳನ್ನು ಪಡೆದರೆ ಬಿಜೆಪಿಯ ಶಿವರಾಜ್ ಸಜ್ಜನರ 52,922 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‌ನ ನಿಯಾಜ್ ಶೇಖ್ 629 ಮತಗಳನ್ನು ಗಳಿಸಿದ್ದಾರೆ. ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಬೇಕಿದೆ.
7063 ಮತಗಳ ಮುನ್ನಡೆಯನ್ನು ಪಡೆದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಯನ್ನು ತೊಡಗಿದ್ದಾರೆ. ಕಾಂಗ್ರೆಸ್‌ಗೆ ಮುನ್ನಡೆ ಸಿಗುತ್ತಿದ್ದಂತೆ ಮತ ಎಣಿಕೆ ಕೇಂದ್ರದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಸ್ಥಳದಿಂದ ತೆರಳಿದರು.
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು