ಹಳೆ ದ್ವೇಷದ ಹಿನ್ನಲೆಯಲ್ಲಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷನನ್ನೇ ಬರ್ಭರವಾಗಿ ಕೊಲೆಗೈದ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆಯ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಅಶೋಕ್(46) ಎಂಬುವವರೇ ಕೊಲೆಯಾದವರು.
ಗೆಳೆಯ ಸೋಮಶೇಖರ್ ಎಂಬುವರ ಜೊತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ಸಂದರ್ಭದಲ್ಲಿ, ಟಾಟಾ ಏಸ್ ವಾಹನವನ್ನು ಹರಿಸಿ ಹತ್ಯೆಗೈಯ್ಯಲಾಗಿದೆ.
ಟಾಟಾ ಏಸ್ ವಾಹನ ಹಿಂಬದಿಯಿಂದ ಹರಿದ ಪರಿಣಾಮ, ಅಶೋಕ್ ಸ್ಥಳದಲ್ಲೇ ಸಾವನ್ನಪ್ಪಿದ್ರೇ.. ಸೋಮಶೇಖರ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಅಶೋಕ್ ಹಾಗೂ ಭೀಮಾ ನಾಯ್ಕ್ ತಾಂಡದ ನಾಗರಾಜ್ ನಾಯ್ಕ್ ಎಂಬುವರ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ ಉಂಟಾಗಿತ್ತು ಎನ್ನಲಾಗಿದೆ.
ಈ ಹಳೆಯ ವೈಷಮ್ಯದಿಂದಲೇ ಅವರ ಮೇಲೆ ಟಾಟಾ ಏಸ್ ಹತ್ತಿಸಿ ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ.
ಚಿಕ್ಕನಾಯಕನಹಳ್ಳಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು