ಅಕ್ಟೋಬರ್ 2 ಭಾರತದ ಎರಡನೇ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜನ್ಮದಿನ. ನಿರ್ಲಕ್ಷ್ಯಕ್ಕೊಳಗಾಗಿರುವ ಸರಳ, ಸಜ್ಜನ ಮಹಾಪುರುಷನನ್ನು ನಾವಿಂದು ಸ್ಮರಿಸಬೇಕಿದೆ.ಶಾಸ್ತ್ರಿಯವರು ಉತ್ತರ ಪ್ರದೇಶದ ವಾರಾಣಸಿ ಜಿಲ್ಲೆಯ ಮೊಘಲ್‌ಸರಾಯ್‌ನಲ್ಲಿ 1904 ಅಕ್ಟೋಬರ್ 2ರಂದು ಜನಿಸಿದರು. ಅವರ ತಂದೆ ಶಾರದಾ ಪ್ರಸಾದ್ ಮತ್ತು ತಾಯಿ ರಾಮದುಲಾರಿ ದೇವಿ. ಶಾಸ್ತ್ರಿಯವರು ಶಾಲೆಯನ್ನು ತೊರೆದು 1920ರಲ್ಲಿ ಗಾಂಧೀಜಿಯವರು ಪ್ರಾರಂಭಿಸಿದ ಅಹಿಂಸಾತ್ಮಕ ಸ್ವಾತಂತ್ಯ ಚಳವಳಿಯಲ್ಲಿ ಭಾಗವಹಿಸಿ. ನಮ್ಮ ದೇಶದ ಸ್ವಾತಂತ್ಯಕ್ಕಾಗಿ ಶ್ರಮಿಸಿದರು.
ಲಾಲ್ ಬಹಾದ್ದೂರ ಶಾಸ್ತ್ರಿ ಗಾಂಧಿ ತತ್ವಗಳಲ್ಲಿ ನಂಬಿಕೆ ಇಟ್ಟ ಸ್ವಾತಂತ್ರ್ಯ ಸೇನಾನಿಯಾಗಿದ್ದರು. ಈ ದೇಶ ಕಂಡ ಸರಳ ಹಾಗೂ ಸಜ್ಜನ ಅತ್ಯುತ್ತಮ ಪ್ರಧಾನಿ. ಮೌಲ್ಯ ಬದ್ಧ ರಾಜಕಾರಣಕ್ಕೆ, ಪ್ರಾಮಾಣಿಕತೆಗೆ ಅವರು ಹೆಸರುವಾಸಿಯಾಗಿದ್ದರು. ತನ್ನ ಅಚಲ ನಿರ್ಧಾರ, ಅದಮ್ಯ ಸಮಯ ಪ್ರಜ್ಞೆ, ಆಗಾಧ ಅರಿವು ಇವುಗಳಿಂದ ಅಧಿಕಾರದುದ್ದಕ್ಕೂ ಎದುರಾದ ಎಲ್ಲ ರಾಷ್ಟ್ರೀಯ, ರಾಜಕೀಯ ವಿಪ್ಲವಗಳನ್ನು ಸಮರ್ಥವಾಗಿ ನಿಭಾಯಿಸಿದರು. ದೇಶದ ಆರ್ಥಿಕ ಹಾಗೂ ಸಮಾಜಿಕ ಅಭಿವೃದ್ಧಿಗಾಗಿ ಶ್ರಮಿಸಿದರು. ‘ಭಾರತದ ಸಮಗ್ರತೆ ಹಾಗೂ ರಾಷ್ಟ್ರ ಧ್ವಜದ ಗೌರವ ಕಾಪಾಡಲು ನಮ್ಮ ಬದುಕಿನ ಕೊನೆ ಕ್ಷ ಣದ ವರೆಗೂ ಹೋರಾಡುತ್ತೇವೆ. ಈ ವಿಷಯದಲ್ಲಿ ನಾವೂ ಸಾವಿಗೂ ಅಂಜುವುದಿಲ್ಲ’ ಹಾಗೂ ‘ಜೈವಾನ್ ಜೈ ಕಿಸಾನ್’ ಎಂಬುದು ಅವರ ಪ್ರಮುಖ ಪ್ರಸಿದ್ಧ ಘೋಷವಾಕ್ಯವಾಗಿದೆ. ಅವರು ಕೊನೆವರೆಗೂ ಸರಳ ಖಾದಿಧಾರಿಯಾಗಿದ್ದು ಸ್ವತಃ ನೂಲುತ್ತಿದ್ದರು. ಉಜ್ಬೇಕಿಸ್ತಾನದ ತಾಷ್ಕೆಂಟ್‌ನಲ್ಲಿ ಜನವರಿ 11, 1966ರಲ್ಲಿ ಶಾಸ್ತ್ರೀಜಿ ಅಕಾಲಿಕವಾಗಿ ಸಾವನ್ನಪ್ಪಿದರು.
ಚಿಕ್ಕ ದೇಹ ದೊಡ್ಡ ಆದರ್ಶ, ಮೆದು ದನಿ, ಉಗ್ರ ರಾಷ್ಟ್ರ ಭಕ್ತಿ, ದೇಶದ ಪ್ರಧಾನಿಯಾದರೂ ಸರಳತೆ ಬಿಡದ ವ್ಯಕಿತ್ವ, ಪ್ರಾಮಾಣಿಕತೆಯನ್ನೇ ಜೀವಾಳವಾಗಿಸಿಕೊಂಡು ಬದುಕಿದ ಶಾಸ್ತ್ರೀಜಿಯವರ ಆದರ್ಶ ಸರ್ವರಿಗೂ ಅನುಕರಣೀಯ. ಹೀಗೆಯೇ ಬದುಕಿದ್ದ ಶಾಸ್ತ್ರೀಜಿ. ಆಗ ಶಾಸ್ತ್ರೀ ಪ್ರಧಾನ ಮಂತ್ರಿ ಗಳಾಗಿದ್ದ ಕಾಲ. ಭಾರತ – ಪಾಕಿಸ್ತಾನದ ನಡುವೆ ಯುದ್ದ. ಶಕ್ತಿ ಪ್ರದರ್ಶನ ಸಿಕ್ಕ ಅವಕಾಶ. ಆಗ ಎರಡು ಘಂಟೆ ಯುದ್ಧ ಮುಂದುವರಿದಿದ್ದರೆ, ಭಾರತೀಯ ಸೇನೆ ಪಾಕಿಸ್ತಾನದ ಲಾಹೋರ್ ತನಕ ತನ್ನ ಅಧಿಪತ್ಯವನ್ನು ಸ್ಥಾಪಿಸುತ್ತಿತ್ತು. ಎಚ್ಚೆತ್ತ ಪಾಕಿಸ್ತಾನ ಅಮೇರಿಕದ ಮುಂದೆ ಮಂಡಿಯೂರಿ ಕೂತಿತು.ಯುದ್ಧವನ್ನು ನಿಲ್ಲಿಸಲು ಭಾರತಕ್ಕೆ ಸೂಚಿಸುವಂತೇ ಗೋಗರೆಯಿತು.
ಭಾರತೀಯರು ಸಾಯಲೂ ಸಿದ್ಧ
ಆಗ ಅಮೇರಿಕದ ಗೋಧಿ ಭಾರತಕ್ಕೆ ಆಮದಾಗುತ್ತಿತ್ತು. ಆ ಗೋಧಿಯ ಗುಣಮಟ್ಟ ಹೇಗಿತ್ತೆಂದರೆ, ಪ್ರಾಣಿಗಳು ತಿನ್ನಲೂ ಅಸಾಧ್ಯವಾಗಿತ್ತು. ಈ ಆಮದು ಒಪ್ಪಂದಕ್ಕೆ ಸಹಿ ಹಾಕಿದ್ದು ಜವಾಹರಲಾಲ್ ನೆಹರೂ. ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ನಿಲ್ಲಿಸದಿದ್ದರೆ, ಗೋಧಿಯ ರಫ್ತನ್ನು ನಿಲ್ಲಿಸುತ್ತೇವೆಂಬ ಬೆದರಿಕೆ ಅಮೇರಿಕದಿಂದ ಶಾಸ್ತ್ರೀಜಿಯವರಿಗೆ ಬಂತು.
ಶಾಸ್ತ್ರೀಜಿಯವರಿಂದ ಬಂದ ಉತ್ತರ, “ನಿಲ್ಲಿಸಿ ತೊಂದರೆಯಿಲ್ಲ”
“ಹೊಟ್ಟೆಗೆ ಆಹಾರವಿಲ್ಲದಿದ್ದರೆ ಭಾರತೀಯರು ಸಾಯುತ್ತಾರೆ ” ಅಮೇರಿಕದ ಕುಚೋದ್ಯ ಪ್ರತಿಕ್ರಿಯೆ..!!
“ದುಡ್ಡು ಕೊಟ್ಟು ನಿಮ್ಮ ಕಳಪೆಗುಣಮಟ್ಟದ ಗೋಧಿಯನ್ನು ತಿಂದು ಆರೋಗ್ಯ ಕೆಡಿಸಿಕೊಳ್ಳುವುದಕ್ಕಿಂತ, ಹಸಿವಿನಿಂದ ಸಾಯುವುದೇ ವಾಸಿ. ಇಂದಿನಿಂದ ನಿಮ್ಮ ಗೋಧಿ ನಮಗೆ ಬೇಕಿಲ್ಲ ” ಶಾಸ್ತ್ರೀಜಿಯವರ ತೀಕ್ಷ್ಣ ಪ್ರತಿಕ್ರಿಯೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಶಾಸ್ತ್ರೀಜಿ ದೇಶದ ಜನರಲ್ಲಿ ಎರಡು ಮನವಿ ಮಾಡಿದರು.
“ಪಾಕಿಸ್ತಾನದೊಂದಿಗೆ ಯುದ್ಧ ನಡೆಯುತ್ತಿದೆ.
ಅಮೇರಿಕದಿಂದ ಗೋಧಿ ಆಮದಾಗುವುದು ನಿಂತಿದೆ.ದೇಶದ ಜನ ಸಹಕರಿಸಬೇಕಿದೆ.
ಒಂದು.. ನೀವು ನೇರವಾಗಿ ಸೇನೆಗೆ ಧನ ಅಥವಾ ಆಹಾರದ ಸಹಾಯವನ್ನು ಮಾಡಬಹುದು.
ಎರಡನೇಯದ್ದು ಪ್ರತಿ ಸೋಮವಾರ ನೀವು ಉಪವಾಸವೃತವನ್ನು ಆಚರಿಸಬಹುದು. ಇದರಿಂದ ದೇಶದ ಹಣಕಾಸಿ ವ್ಯವಹಾರ ಸರಾಗವಾಗಿ ನಡೆಯಬಹುದು. ಇಲ್ಲದಿದ್ದರೆ ದೇಶ ಆರ್ಥಿಕ ಸಂಕಷ್ಟಗಳನ್ನು ಎದುರಿಸಬೇಕಾಗಬಹುದು”
ಶಾಸ್ತ್ರೀಜಿಯವರ ಈ ಕರೆಗೆ ಇಡೀ ದೇಶ ಓಗೊಟ್ಟಿತು.
ಹಲವರು ಸೇನೆಗೆ ಸಹಾಯ ಮಾಡಿದರು. ಲಕ್ಷಾಂತರ ಜನ ಸೋಮವಾರದ ಉಪವಾಸವನ್ನು ಆರಂಭಿಸಿದರು.
ಸ್ವತಃ ಶಾಸ್ತ್ರೀಜಿಯವರೂ ಸೋಮವಾರದಂದು ಉಪವಾಸವೃತವನ್ನು ಕೈಗೊಂಡರು.
ಕೆಲಸಕ್ಕೆ ಬರಬೇಡ
ಶಾಸ್ತ್ರೀಜಿಯವರ ಪತ್ನಿ, ಲಲಿತಾದೇವಿಯವರು ಅನಾರೋಗ್ಯಪೀಡಿತರಾಗಿದ್ದರು ಮನೆಗೆಲಸಕ್ಕೆಂದು ಕೆಲಸದವಳೊಬ್ಬಳು ಬರುತ್ತಿದ್ದಳು. ಶಾಸ್ತ್ರೀಜಿಯವರು ಮಹಿಳೆಗೆ ನಾಳೆಯಿಂದ ಕೆಲಸಕ್ಕೆ ಬರಬೇಡ ಎಂದರು. ಆಕೆ ”ಅಲ್ಲ,ನಿಮ್ಮ ಬಟ್ಟೆಯನ್ನು ತೊಳೆಯುವುದು, ಮನೆಯನ್ನು ಸ್ವಚ್ಛಗೊಳಿಸುವುದು, ನಿಮ್ಮ ಪತ್ನಿಯ ಆರೈಕೆಯನ್ನು ಯಾರು ಮಾಡಿಕೊಡುತ್ತಾರೆ ಸ್ವಾಮೀ” ಎಂದು ಕೇಳಿದಳು.
“ದೇಶಕ್ಕಾಗಿ ಇದು ಅನಿವಾರ್ಯವಮ್ಮಾ. ನಿನಗೆ ಕೊಡುವ ಸಂಬಳದ ಹಣವಾದರೂ ಉಳಿದೀತು. ದೇಶದ ಒಳಿತಿಗಾದೀತು” ಎಂದು ಹೇಳಿದರು. ನಂತರ ಮನೆಯ ಪ್ರತಿಯೊಂದು ಕೆಲಸವನ್ನೂ ಶಾಸ್ತ್ರೀಜಿಯವರೇ ನಿಭಾಯಿಸುತ್ತಿದ್ದರು.
ಟ್ಯೂಷನ್ ಬೇಡ ಅಂದ್ರು
ಶಾಸ್ತ್ರೀಜಿಯವರ ಮಕ್ಕಳಿಗೆ ಇಂಗ್ಲೀಷ್ ಹೇಳಿಕೊಡಲೆಂದು ಟ್ಯೂಷನ್ ಗೆ ಟೀಚರ್ ಬರುತ್ತಿದ್ದರು.ಅವರನ್ನೂ ಕೆಲಸದಿಂದ ವಿಮುಕ್ತಗೊಳಿಸಿದರು.”ಮಕ್ಕಳು ಇಂಗ್ಲೀಷಿನಲ್ಲಿ ಫೇಲಾಗುತ್ತಾರೆ. ”ಟ್ಯೂಷನ್ ಹೇಳಿದಿದ್ದರೆ ಎಂದದ್ದಕ್ಕೆ ಶಾಸ್ತ್ರೀಜಿ,” ಆಗಲಿ ಬಿಡಿ ಇಂಗ್ಲೀಷ್ ನಮ್ಮ ಭಾಷೆಯಲ್ಲ.ಇಂಗ್ಲಿಷರು ಹಿಂದಿಯನ್ನು ಬರೆದರೆ ಅವರೂ ಫೇಲಾಗುತ್ತಾರೆ” ಎಂದರು.
ಒಂದು ದಿನ ಶಾಸ್ತ್ರೀಜಿಯವರ ಪತ್ನಿ, ಹರಿದು ಹೋಗಿರುವ ಅವರ ಧೋತಿಯನ್ನು ನೋಡಿ “ಒಂದು ಹೊಸ ಧೋತಿಯನ್ನಾದರೂ ತೆಗೆದುಕೊಳ್ಳಬಾರದೇ?” ಎಂದು ಕೇಳುತ್ತಾರೆ.” ಅದನ್ನು ಕೊಳ್ಳಲು ಹಣವೆಲ್ಲಿದೆ..? ಬರುವ ಸಂಬಳವನ್ನೂ ಬಿಟ್ಟಾಗಿದೆ. ಮನೆಯ ಖರ್ಚುಗಳನ್ನು ಕಡಿಮೆ ಮಾಡು” ಎಂದಿದ್ದರು.
ಇಂತಹ ಆದರ್ಶ ವ್ಯಕ್ತಿ ನಮ್ಮ ದೇಶದ ಪ್ರಧಾನಿಯಾಗಿದ್ದರು ಎಂಬುದೇ ಹೆಮ್ಮೆ.
More Stories
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ