ಬೆಂಗಳೂರಲ್ಲಿ ಇಂದು ನಡೆಯಲಿರುವ ‘ಪುನೀತ್ ನಮನ’ ಕಾರ್ಯಕ್ರಮಕ್ಕೆ ಸಿದ್ದತೆಗಳು ಪೂಣ೯ಗೊಂಡಿವೆ. ಅಭಿಮಾನಿಗಳಿಗೆ ಭಾಗವಹಿಸಲು ಅವಕಾಶವೇ ಇಲ್ಲ. 2000 ಮಂದಿ ಚಿತ್ರರಂಗ ಹಾಗೂ ರಾಜಕೀಯ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ‘ಪುನೀತ ನಮನ’ ಕಾರ್ಯಕ್ರಮವನ್ನು ಆಯೋಜಿಸಿದೆ.
ಮಧ್ಯಾಹ್ನ ಅರಮನೆ ಮೈದಾನದ ಗಾಯತ್ರಿ ವಿಹಾರ್ನಲ್ಲಿ ದಿವಂಗತ ಪುನೀತ್ ರಾಜ್ಕುಮಾರ್ ಗೆ ನಮನ ಸಲ್ಲಿಸಲಾಗುವುದು
2000 ಜನರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಸಿಎಂ, ಮಾಜಿ ಸಿಎಂ ಹಾಗೂ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪಾಸ್ ಇದ್ದವರಿಗೆ ಮಾತ್ರ ಕಾರ್ಯಕ್ರಮಕ್ಕೆ ಪ್ರವೇಶವಿದೆ.
ನಟರಾದ ಸುದೀಪ್, ಯಶ್, ಗಣೇಶ್, ಉಪೇಂದ್ರ, ರವಿಚಂದ್ರನ್, ಶ್ರೀಮುರಳಿ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಧ್ರುವ ಸರ್ಜಾ ಸೇರಿದಂತೆ ಕನ್ನಡದ ಎಲ್ಲಾ ಕಲಾವಿದರು ಭಾಗಿ ಆಗಲಿದ್ದಾರೆ.
ಚಿತ್ರ ಸಾಹಿತಿ ನಾಗೇಂದ್ರ ಪ್ರಸಾದ್ ಬರೆದಿರುವ ಹಾಡಿಗೆ ಗುರುಕಿರಣ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಗೀತೆಯ ಮೂಲಕ ನಮನ ಕಾರ್ಯಕ್ರಮ ಆರಂಭ ಆಗಲಿದೆ. ವಿಜಯ್ ಪ್ರಕಾಶ್, ಗುರುಕಿರಣ್ ಹಾಗೂ ರಾಜೇಶ್ ಕೃಷ್ಣನ್ ಅವರಿಂದ ಗೀತ ನಮನ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್ವುಡ್ನ 142 ಕಲಾವಿದರಿಗೆ ಆಮಂತ್ರಣ ನೀಡಲಾಗಿದೆ. ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರು ಬರುವ ನಿರೀಕ್ಷೆ ಇದೆ.
ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಸೇರಿ ದೊಡ್ಮನೆ ಕುಟುಂಬದ ಎಲ್ಲಾ ಸದಸ್ಯರು ಕಾರ್ಯಕ್ರಮಕ್ಕೆ ಬರಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ