ಯುವ ರತ್ನ ಪುನೀತ್ರಾಜ್ ಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪುರಸ್ಕಾರ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದರು,
ಬೆಂಗಳೂರಿನ ಅರಮನೆಯಲ್ಲಿ ನಡೆದ ಅಪ್ಪು ನುಡಿ ನಮನ ಕಾರ್ಯಕ್ರಮದಲ್ಲಿ ಮಾತಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪುರಸ್ಕಾರ ನೀಡುವುದಾಗಿ ಘೋಷಿಸಿದ್ದಾರೆ.
ಪುನೀತ್ ನಮನ ಕಾರ್ಯಕ್ರಮದಲ್ಲಿ ಮಾತಾಡಿದ ಬೊಮ್ಮಾಯಿ, ಅಪ್ಪು ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಅಪ್ಪನ ಹಾದಿಯಲ್ಲೇ ನಡೆದ ಮಗ, ಇಡೀ ಕರ್ನಾಟಕದಲ್ಲೇ ಮೊದಲ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ ಅವನು ನಮ್ಮ ನಡುವೆಯೇ ಇದ್ದಾನೆ ಎಂದರು.
ಈ ಹಿಂದೆಯೂ ಪುನೀತ್ ರಾಜ್ ಕುಮಾರ್ ಅಗಲಿದಾಗ ಮಗುವಂತೆ ಅತ್ತಿದ್ದರು ಬೊಮ್ಮಾಯಿ. ಅಲ್ಲದೇ ಅಪ್ಪು ಹಣೆಗೆ ಮುತ್ತು ಕೊಟ್ಟು ತಮ್ಮ ಪ್ರೀತಿಯನ್ನ ತೋರಿಸಿದವರು.
ಇಂದಿನ ‘‘ಪುನೀತ ನಮನ’’ ಕಾರ್ಯಕ್ರಮದಲ್ಲಿ ಭಾವುಕರಾಗಿ ಅಭಿಮಾನದಿಂದ ಮಾತನಾಡಿದ ಮುಖ್ಯಮಂತ್ರಿಗಳು ಅಪ್ಪು ಅವರ ಭಾವ ಚಿತ್ರಕ್ಕೆ ಪುಷ್ಪಾಂಜಲಿ ಅರ್ಪಿಸಿದರು.
ಬಳಿಕ ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪುರಸ್ಕಾರ ಘೋಷಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು