ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಭೌತಶಾಸ್ತ್ರ ಶಿಕ್ಷಕನನ್ನು ಕೊಯಮತ್ತೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕೊಯಮತ್ತೂರಿನ ಶಾಲೆಯಲ್ಲಿ ಭೌತಶಾಸ್ತ್ರದ ಶಿಕ್ಷಕರೊಬ್ಬರು 12ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದರು.
ಆಕೆ ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಹಿನ್ನೆಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಅದು ಅಲ್ಲದೇ ಬಾಲಕಿಯ ದೂರಿನ ಮೇರೆಗೆ ಕ್ರಮಕೈಗೊಳ್ಳದ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನೂ ಪೊಲೀಸರು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟುವ ಕಾನೂನಿನಡಿಯಲ್ಲಿ ಬಂಧಿಸಿದ್ದಾರೆ. ಈ ಕೃತ್ಯದಲ್ಲಿ ಇನ್ನಿಬ್ಬರು ಭಾಗಿಯಾಗಿರುವ ಬಗ್ಗೆ ಕೈಬರಹದ ಟಿಪ್ಪಣಿಯನ್ನು ಪರಿಶೀಲಿಸಿದಾಗ ಪೊಲೀಸರಿಗೆ ತಿಳಿದಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಅಧಿಕಾರಿಯೊಬ್ಬರು, ಈ ವರ್ಷದ ಮೊದಲಾರ್ಧದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವಂತೆ ತೋರುತ್ತಿದೆ. ಶಿಕ್ಷಕರ ವಾಟ್ಸಾಪ್ ಚಾಟ್‍ನ ಆಡಿಯೊ ಸಂಭಾಷಣೆ ವೈರಲ್ ಆದ ಬಳಿಕ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ