ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಬಿಟ್‍ಕಾಯಿನ್ ಪ್ರಕರಣಕ್ಕೆ ಸಂಬಂಧಿದಂತೆ ಬಿಜೆಪಿ 3 ವರ್ಷದ ಹಿಂದೆ ಮೃತಪಟ್ಟಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮಗ ರಾಕೇಶ್ ಸಿದ್ದರಾಮಯ್ಯರ ಹೆಸರು ಎಳೆದು ತಂದಿದೆ
ಬಿಜೆಪಿ ಮಾಡಿರುವ ಟ್ವಿಟರ್ ನಲ್ಲಿ ಫೋಟೋ ಸಮೇತ ಕೆಲವು ಸಂಗತಿಗಳನ್ನು ಹೇಳಲಾಗಿದೆ .
ಬಿಟ್ ಕಾಯಿನ್ ಹಗರಣದಲ್ಲಿ ಪ್ರಭಾವಿಗಳು ಇದ್ದಾರೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದರು. ಆದರೆ ಈಗ ದಾಖಲೆಯೇ ಇಲ್ಲ ಎನ್ನುತ್ತಿದ್ದಾರೆ. ನಿಮ್ಮ ಅತ್ಯಾಪ್ತರ ವಹಿವಾಟು ನಿಮ್ಮನ್ನು ಅಸಹಾಕನನ್ನಾಗಿ ಮಾಡಿದೆಯೇ? ಬಿಟ್ ಕಾಯಿನ್ ಪ್ರಭಾ ವಲಯ ನಿಮ್ಮನ್ನೇ ಸುತ್ತಿಕೊಳ್ಳಬಹುದೆಂಬ ಭಯ ಕಾಡುತ್ತಿದೆಯೇ? ಮಾನ್ಯ ಬುರುಡೆರಾಮಯ್ಯ, ನಿಮ್ಮ ಅವಧಿಯಲ್ಲಿ ನಡೆದ ಈ ಹಗರಣವನ್ನು ಮುಚ್ಚಿ ಹಾಕುವುದು ನಿಮಗೆ ತೀರಾ ಅನಿವಾರ್ಯವಾಗಿತ್ತು ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಅಪ್ರಿಯವಾದ ಸತ್ಯ ಹೇಳುತ್ತೇವೆ, ಇಲ್ಲಿ ನಿಮ್ಮ ಅತ್ಯಾಪ್ತರೇ ಇದ್ದರು ಎಂಬ ಅನುಮಾನಕ್ಕೆ ಈ ಚಿತ್ರ ಪುಷ್ಠಿ ನೀಡುತ್ತಿದೆ ಎಂದು ಹೇಳಿದೆ.
ಸತ್ಯ ಅನಾವರಣವಾಗುವ ಭಯಕ್ಕೆ ನೀವು ಯೂಟರ್ನ್ ತೆಗೆದುಕೊಳ್ಳುತ್ತಿದ್ದೀರಿ ಅಲ್ಲವೇ? ಮಾನ್ಯ ಸಿದ್ದರಾಮಯ್ಯನವರೇ, ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್‍ನಲ್ಲಿ ನಡೆಯುತ್ತಿದ್ದ ಹುಕ್ಕಾ ಬಾರ್ ಆ ಎಲ್ಲಾ ಚಟುವಟಿಕೆಯ ಕೇಂದ್ರವಾಗಿತ್ತು. ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ, ಶ್ರೀಕಿಯಂಥವರು ಆಗ ನಿಮ್ಮ ಮನೆಯ ಸುತ್ತಮುತ್ತಲೂ ಓಡಾಡಿರಲೂ ಬಹುದಲ್ಲವೇ!? ಡ್ರಗ್ಸ್ ಹಾಗೂ ಬಿಟ್ ಕಾಯಿನ್ ಅವ್ಯವಹಾರ ಬಹಿರಂಗವಾಗಿದ್ದು ನಿಮ್ಮ ಕಾಲದಲ್ಲಿ. ಒಂದೆರಡು ಕಡೆ ದಾಳಿ ನಡೆದರೂ ತನಿಖೆ ಹಠಾತ್ ಸ್ಥಗಿತಗೊಂಡಿತುಎಂದು ಬಿಜೆಪಿ ಕುಟುಕಿದೆ.
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
- ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
More Stories
ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ