ಪೇಜಾವರ ಶ್ರೀಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಈ ವಿಷಯ ತಿಳಿಸಿ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಹಂಸಲೇಖಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದೇವೆ ಎಂದರು.
ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ವಿಪ್ರ ಯುವ ವೇದಿಕೆ ಮೂಲಕ ಅಖಿಲ ಭಾರತ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ಕೃಷ್ಣ ಅವರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
ವಿದ್ಯಾಪೀಠ ಸರ್ಕಲ್ ಬಳಿ ಇರುವ ಶ್ರೀಗಳ ಬೃಂದಾವನದ ಮುಂದೆ ಬಂದು ಹಂಸಲೇಖ ಕ್ಷಮೆ ಕೇಳಬೇಕು. ಬಹಿರಂಗ ಹೇಳಿಕೆ ನೀಡಿ ನಾಲ್ಕು ಗೋಡೆ ಮುಂದೆ ಕ್ಷಮೆ ಕೇಳೋದಲ್ಲ. ಬೃಂದಾವನದ ಮುಂದೆಯೇ ಕ್ಷಮೆ ಕೇಳಬೇಕು. ಎಲ್ಲಿ ಅಪಮಾನ ಆಗಿದ್ಯೋ ಅಲ್ಲಿಯೇ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
More Stories
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ