ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿ ಆಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಗೆಲುವು ಸಿಕ್ಕಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸರಣಿ ಟ್ವೀಟ್ಗಳನ್ನು ಮಾಡಿದ ಸಿದ್ದರಾಮಯ್ಯ ಕೃಷಿ ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು. ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದಾರೆ.
ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾಗಿವೆ. ಹಾಗಾಗಿ ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು