ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಶೌರ್ಯ ಪ್ರದರ್ಶನ ತೋರಿದ್ದ ಇಂಡಿಯನ್ ಏರ್ಫೋರ್ಸ್ನ ಈಗಿನ ಗ್ರೂಪ್ ಕ್ಯಾಪ್ಟನ್ ಅಂದಿನ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ‘ವೀರ ಚಕ್ರ’ ಪುರಸ್ಕಾರ ಮಾಡಲಾಯಿತು.
ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು.
ಬಾಲಾಕೋಟ್‌ನ ಜೈಷ್ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ನಡೆಸಿದ ಕೆಚ್ಚೆದೆಯ ವೈಮಾನಿಕ ದಾಳಿ ನಂತರದ ಬೆಳವಣಿಗೆಯಲ್ಲಿ ಪಾಕಿಸ್ತಾನದ ಯುದ್ಧ ವಿಮಾನವನ್ನು ವಿಂಗ್ ಕಮಾಂಡರ್ ಅಭಿನಂದನ್ ಹೊಡೆದುರುಳಿಸಿದ್ದರು.
ಜೊತೆಗೆ ಬಾಲಾಕೋಟ್ ದಾಳಿಯಲ್ಲಿ ಪಾಲ್ಗೊಂಡಿದ್ದ ವಾಯುಪಡೆಯ ಅಮಿತ್ ರಂಜನ್, ರಾಹುಲ್ ಬಸೋಯಾ, ಪಂಕಜ್ ಭುಜಾಡೆ, ಬಿಕೆಎನ್ ರೆಡ್ಡಿ, ಶಶಾಂಕ್ ಸಿಂಗ್ ಸೇರಿದಂತೆ ಐಎಎಫ್‌ನ 7 ಪೈಲಟ್‌ಗಳಿಗೆ ಕೂಡಾ’ವಾಯುಸೇನಾ’ ಪದಕ ಪ್ರಕಟಿಸಲಾಗಿದೆ.
ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನ ಹೊಡೆದುರುಳಿಸಿ, ನಂತರ ಶತ್ರುಗಳ ಕೈಗೆ ಆಕಸ್ಮಿಕವಾಗಿ ಸಿಕ್ಕಿಹಾಕಿಕೊಂಡಿದ್ದರು. ಭಾರತದ ಕಠಿಣ ನಿಲುವಿನ ಬಳಿಕ ಅವರು ಅವರು ತಾಯ್ನಾಡಿಗೆ ವಾಪಸ್ ಆಗಿದ್ದರು. ಇತ್ತೀಚಿಗೆ ಅವರಿಗೆ ಭಾರತೀಯ ವಾಯು ಸೇನೆಯಲ್ಲಿ ಗ್ರೂಪ್ ಕ್ಯಾಪ್ಟನ್ ಱಂಕ್ಗೆ ಪ್ರಮೋಷನ್ ನೀಡಲಾಗಿದೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ