January 1, 2025

Newsnap Kannada

The World at your finger tips!

jds

ನಮ್ಮ ಶಂಖವನ್ನು ನಾನೇ ಊದಬೇಕು – ಈಶ್ವರಪ್ಪಗೆ ಟಾಂಗ್ ಕೊಟ್ಟ ಹೆಚ್‌ಡಿಕೆ

Spread the love

ಶಂಖ ಊದುವುದಕ್ಕೆ ಜೆಡಿಎಸ್‍ನಲ್ಲಿ ಜನ ಇಲ್ಲ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆ

ನಮ್ಮ ಶಂಖವನ್ನು ನಾನೇ ಊದಬೇಕು. ಹೀಗಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ನಾನೇ ಪ್ರಚಾರ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಸಚಿವ ಈಶ್ವರಪ್ಪ ಹೇಳಿಕೆಗೆ ಟಾಂಗ್ ನೀಡಿದರು.

ಶಂಖ ಊದುವುದಕ್ಕೆ ಜೆಡಿಎಸ್‍ನಲ್ಲಿ ಜನ ಇಲ್ಲ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆಮೈಸೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, ನಮಗೆ ಕಾರ್ಯಕರ್ತರೇ ಶಕ್ತಿ, ಕಾರ್ಯಕರ್ತರಿಗೆ ನಾಯಕನನ್ನು ಹುಟ್ಟುಹಾಕುವ ಸಾಮರ್ಥ್ಯ ಇರೋದು. ಹೀಗಾಗಿ ಬಂಡೇಳುವ ಶಾಸಕರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು

ಪರ್ಯಾಯ ನಾಯಕರನ್ನು ಕಾರ್ಯಕರ್ತರೇ ಹುಡುಕುವ ಶಕ್ತಿ ಹೊಂದಿದ್ದಾರೆ. ಚುನಾವಣೆ ಎದುರಿಸಲು ಮಾನಸಿಕವಾಗಿ ಸಿದ್ದರಿದ್ದೇವೆ ಎಂದು ಹೇಳಿದರು.

ನಮ್ಮ ಸಾಮರ್ಥ್ಯಕ್ಕನುಸಾರ ಏಳು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದೇವೆ. ಎಲ್ಲೆಲ್ಲಿ ಗೆಲುವಿಗೆ ಅವಕಾಶವಿದೆಯೋ ಅಲ್ಲಿ ಸ್ಪರ್ಧೆ ಮಾಡಲಾಗುತ್ತಿದೆ. ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕರು ಪರಿಸ್ಥಿತಿಗೆ ಅನುಗುಣವಾಗಿ ತೀರ್ಮಾನ ಮಾಡುತ್ತಾರೆ ಎಂದರು

ನನ್ನ ಗುರಿ ಮುಂದಿನ ವಿಧಾನಸಭಾ ಚುನಾವಣೆ ಮೇಲೆ. 123 ಕ್ಷೇತ್ರಗಳನ್ನು ಗೆದ್ದು ಅಧಿಕಾರ ಹಿಡಿಯಬೇಕಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ವಿಧಾನ ಪರಿಷತ್ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.

Copyright © All rights reserved Newsnap | Newsever by AF themes.
error: Content is protected !!