ರಾಜಕೀಯದಲ್ಲಿ ದೇವೇಗೌಡರ ಕುಟುಂಬ ಮಾತ್ರ ಇದೆಯಾ?
ದೇವೇಗೌಡರ ಮಾತ್ರ ಕುಟುಂಬ ರಾಜಕಾರಣ ಮಾಡುತ್ತಾರಾ? . ಆದರೆ ಎಲ್ಲಾ ರಾಜಕೀಯ ವ್ಯಕ್ತಿಗಳ ಮನೆಯಲ್ಲಿ ನಾಲ್ಕೈದು ಜನ ರಾಜಕೀಯದಲ್ಲಿ ಇದ್ದಾರೆ. ಆದರೂ ನಮ್ಮ ಕುಟುಂಬಕ್ಕೆ ಆ ಕಳಂಕ ಯಾಕೆ ಎಂದು ದೇವೇಗೌಡರ ಮೊಮ್ಮಗ , ಹಾಸನದ ಜೆಡಿಎಸ್ ಅಭ್ಯಥಿ೯ ಸೂರಜ್ ರೇವಣ್ಣ ಕಿಡಿಕಾರಿದರು
ಹಾಸನದಲ್ಲಿ ಮಂಗಳವಾರ ಎಂಎಲ್‍ಸಿ ಚುನಾವಣೆಗೆ ನಾಮಪತ್ರ ಸಲ್ಲಿಸಿ ಸುದ್ದಿಗಾರರ ಜೊತೆ ಮಾತನಾಡಿದ ಸೂರಜ್ ತಮ್ಮ ಸ್ಪರ್ಧೆಯನ್ನು ಕುಟುಂಬ ರಾಜಕಾರಣ ಟೀಕಿಸುತ್ತಿರುವವರ ವಿರುದ್ಧ ವಾಗ್ದಾಳಿ ಮಾಡಿದರು.
ಬೆಳಗಾವಿಯಿಂದ ಕನಕಪುರದವರೆಗೂ ಒಂದೊಂದು ಕುಟುಂಬದಲ್ಲಿ ಎಷ್ಟೆಷ್ಟು ಜನ ರಾಜಕಾರಣದಲ್ಲಿದ್ದಾರೆ ಎಂದು ಲೆಕ್ಕ ಹಾಕಿ. ಶಿವಮೊಗ್ಗ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಕುಟುಂಬ ರಾಜಕಾರಣ ಇದ್ದಿದ್ದೇ. ದೇವೇಗೌಡರ ಕುಟುಂಬ ಬಂದಾಗ ಮಾತ್ರ ಕುಟುಂಬ ರಾಜಕಾರಣ ತರುತ್ತಾರೆ ಎಂದರು
ನಮ್ಮ ತಾತ ಅವರು ಧೃಡವಾದ ನಿರ್ಧಾರ ತಗೊಂಡು ನನ್ನ ಅಭ್ಯರ್ಥಿ ಮಾಡಿದ್ದಾರೆ. ನಾನು ಅನಿರೀಕ್ಷಿತವಾಗಿ ಅಭ್ಯರ್ಥಿಯಾಗಿದ್ದೇನೆ. ನಾನು ಅಭ್ಯರ್ಥಿಯಾಗುವ ಅಪೇಕ್ಷೆ ಇರಲಿಲ್ಲ. ಐದಾರು ವರ್ಷದಿಂದ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದೇನೆ. ಎಲ್ಲೆಡೆ ಮಳೆಯಾಗಿ ಅಪಾರ ನಷ್ಟವಾಗಿದೆ. ಅದರ ಬಗ್ಗೆ ಮಾತನಾಡಲು ಒಬ್ಬರು ಬೇಕು. ಅದು ಮೇಲ್ಮನೆಯಾಗಲಿ, ಕೆಳಮನೆಯಾಗಲಿ ಪರ್ವಾಗಿಲ್ಲ ಎಂದು ಸೂರಜ್ ರೇವಣ್ಣ ಹೇಳಿದರು.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿ ಅಕ್ರಮವಾಗಿ ವಾಸಿಸುತ್ತಿದ್ದ 3 ಬಾಂಗ್ಲಾದೇಶ ಪ್ರಜೆಗಳು ಬಂಧನ
10 ವರ್ಷದ ಬಾಲಕ ಹೃದಯಘಾತದಿಂದ ಸಾವು
ಪತ್ನಿಗೆ ಚಾಕು ಇರಿದ ಪೊಲೀಸ್ ಕಾನ್ಸ್ ಟೇಬಲ್