ಮತ್ತೆ ಪೆಟ್ರೋಲ್ , ಡಿಸೇಲ್ ಬೆಲೆ ಇಳಿಕೆ ಕಾಣುವ ಸಾಧ್ಯತೆ ಇದೆ. ಇದು ಶ್ರೀ ಸಾಮಾನ್ಯರಿಗೆ ಸದ್ಯದಲ್ಲೇ ಇನ್ನೊಂದು ಗುಡ್ ನ್ಯೂಸ್ ಸಿಗಬಹುದು.
ಕೇಂದ್ರವು ತನ್ನ ಐದು ಮಿಲಿಯನ್ ಬ್ಯಾರಲ್ ಕಚ್ಚಾ ತೈಲ ಬಿಡುಗಡೆ ಮಾಡಲು ನಿರ್ಧರಿಸಿದೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇನ್ನಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ.
ದೆಹಲಿಯಲ್ಲಿ ನಡೆದ ಉನ್ನತ ಸಚಿವಾಲಯ ಹಾಗೂ ತೈಲ ಮಾರುಕಟ್ಟೆ ಕಂಪನಿಗಳ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಈ ನಿರ್ಧಾರ ಕೈಗೊಂಡಿದ್ದಾರೆ
ಅಮೆರಿಕ, ಚೀನಾ, ಜಪಾನ್ ಹಾಗೂ ದಕ್ಷಿಣ ಕೋರಿಯಾ ಸೇರಿದಂತೆ ಇತರೆ ಪ್ರಮುಖ ಜಾಗತಿಕ ಇಂಧನ ಗ್ರಾಹಕರ ಜೊತೆಯಲ್ಲಿ ಸಮಾಲೋಚನೆಯಲ್ಲಿ ಐದು ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಬಿಡುಗಡೆ ಮಾಡಲಾಗುತ್ತದೆ. ಕಚ್ಚಾ ತೈಲದ ಬೆಲೆಯನ್ನು ತಗ್ಗಿಸುವ ಸಲುವಾಗಿ ಅಮೆರಿಕವು ಪೆಟ್ರೋಲಿಯಂ ನಿಕ್ಷೇಪಗಳನ್ನು ಬಿಡುಗಡೆ ಮಾಡಲು ನಿರ್ಧಾರ ಕೈಗೊಂಡ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕಾರ್ಯತಂತ್ರವು ಸರಿಯಾದ ರೀತಿಯಲ್ಲಿ ಅನುಷ್ಟಾನಕ್ಕೆ ಬಂದಲ್ಲಿ ಇಂಧನಗಳ ಬೆಲೆಯಲ್ಲಿ ಇನ್ನಷ್ಟು ಇಳಿಕೆ ಕಂಡು ಬರಲಿದೆ
ಕೇಂದ್ರ ಸರ್ಕಾರವು ನವೆಂಬರ್ ಮೂರರಂದು ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಕ್ರಮವಾಗಿ ಐದು ಹಾಗೂ ಹತ್ತು ರೂಪಾಯಿ ಇಳಿಕೆ ಮಾಡಿತ್ತು.
- ಪೆಟ್ರೋಲ್ GST ವ್ಯಾಪ್ತಿಗೆ ಸೇರಿಸುವ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಹತ್ವದ ಸ್ಪಷ್ಟನೆ
- ಐಶ್ವರ್ಯಗೌಡ ವಂಚನೆ ಪ್ರಕರಣ: ಶಾಸಕ ನರೇಂದ್ರಸ್ವಾಮಿಯ ಕೈವಾಡ ಶಂಕೆ, ಅನ್ನದಾನಿಯ ಗಂಭೀರ ಆರೋಪ
- ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ
- 12 ರಾಶಿಗಳ 2025ರ ವಾರ್ಷಿಕ ಭವಿಷ್ಯ
- ಅಂಗನವಾಡಿಗೆ ತೆರಳಿದ್ದ 3 ವರ್ಷದ ಬಾಲಕಿಗೆ ಹಾವು ಕಚ್ಚಿ ದಾರುಣ ಸಾವು
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ