ಈ ಎಚ್.ಡಿ.ಕುಮಾರಸ್ವಾಮಿ ಮುಸಲ್ಮಾನರನ್ನು ಬಲಿ ತೆಗೆದುಕೊಳ್ಳುತ್ತಿದ್ದಾರೆ. ಬಲಿ ಕೊಡೋದಕ್ಕೆ ಅವರಿಗೆ ಸಿಗೋದೆ ಅಲ್ಪಸಂಖ್ಯಾತರು ಎಂದು ಶಾಸಕ ಜಮೀರ್ ಅಹ್ಮದ್ ಪ್ರಶ್ನೆ ಮಾಡಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಜೆಡಿಎಸ್‍ನವರು ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಮಡಿಕೇರಿಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಎಂಎಲ್ಸಿ ಟಿಕೆಟ್ ಕೊಟ್ಟಿದ್ದಾರೆ. ಅಲ್ಲಿ ಮುಸ್ಲಿಂ ಅಭ್ಯರ್ಥಿ ಗೆಲ್ಲೋಕೆ ಸಾಧ್ಯವೇ? ಎಂದು ಪ್ರಶ್ನೆ ಮಾಡಿದರು.
ಮುಸಲ್ಮಾನರ ಮೇಲೆ ಪ್ರೀತಿ ಇದ್ದರೆ ಹಾಸನ, ಮಂಡ್ಯದಲ್ಲಿ ಟಿಕೆಟ್ ಕೊಡಬೇಕಿತ್ತು. ರೇವಣ್ಣರ ಮಗನಿಗೆ ಟಿಕೆಟ್ ಕೊಡುವ ಬದಲು ಕಾರ್ಯಕರ್ತರಿಗೊ, ಮುಸ್ಲಿಂ ಅಭ್ಯರ್ಥಿಗೊ ಟಿಕೆಟ್ ಕೊಡಬಹುದಿತ್ತು. ಮೈಸೂರು, ಮಂಡ್ಯ ಅಥವಾ ತುಮಕೂರಿನಲ್ಲಿ ಕೊಡಬೇಕಿತ್ತು. ಮುಸ್ಲಿಮರಿಗೆ ಕೊಟ್ಟಂತೆಯೂ ಆಗಬೇಕು, ಬಿಜೆಪಿಗೆ ಸಹಾಯ ಮಾಡಿದಂತೆಯೂ ಆಗಬೇಕು ಎಂಬ ಕಾರಣಕ್ಕೆ ಸೋಲುವ ಕಡೆ ಟಿಕೆಟ್ ಕೊಟ್ಟಿದ್ದಾರೆ ಎಂದರು.
ಕುಮಾರಸ್ವಾಮಿಗೆ ಬಲಿ ಕೊಡೋದಕ್ಕೆ ಮುಸಲ್ಮಾನರೇ ಸಿಗೋದು. ಗೆಲ್ಲುವ ಕಡೆ ಕೊಟ್ಟರೆ ಕುಮಾರಸ್ವಾಮಿ ಅವರಿಗೂ ಪ್ರೀತಿ ಇದೆ ಅಂತ ಒಪ್ಪಿಕೊಳ್ಳುತ್ತೇನೆ. ರಾಮನಗರಕ್ಕೆ ರಾಜೀನಾಮೆ ಕೊಟ್ಟಾಗ ಅನಿತಕ್ಕನಿಗೆ ಟಿಕೆಟ್ ಕೊಡುವ ಬದಲು ಮುಸ್ಲಿಮರಿಗೆ ಕೊಡಬಹುದಿತ್ತು. ಜೆಡಿಎಸ್‍ನಿಂದ ನೂರಕ್ಕೆ ನೂರರಷ್ಟು ಮುಸಲ್ಮಾನರಿಗೆ ಅನ್ಯಾಯವಾಗುತ್ತಿದೆ. ಜೆಡಿಎಸ್ ಗೆಲ್ಲುವ ಕಡೆ ಅಲ್ಪಸಂಖ್ಯಾತರು ಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
- ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ
More Stories
ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ