ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬ 9 ಮಂದಿ ಮಹಿಳೆಯರ ಜೊತೆ ಅಸಭ್ಯ ವತಿ೯ಸಿರುವ ವಿಡಿಯೋಗಳು ವೈರಲ್ ಆಗಿ ಕಾಮಪುರಾಣ ಬಯಲಾಗಿದೆ.
ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆಸ್ಪತ್ರೆಯ 9 ಮಂದಿ ಮಹಿಳಾ ಸಿಬ್ಬಂದಿ ಜೊತೆಗೆ ರತ್ನಾಕರ್ ಅಸಭ್ಯವಾಗಿ ವರ್ತಿಸಿದ್ದಾನೆ.
ತನ್ನ ತೊಡೆಯ ಓರ್ವ ಮಹಿಳೆಯನ್ನು ಕೂರಿಸಿದ್ದಾನೆ. ಮಹಿಳಾ ಸಿಬ್ಬಂದಿ ಮೂಲಕ ರತ್ನಾಕರ್ ಪಾದ ಸೇವೆ ಮಾಡಿದ್ದಾನೆ. ಇಬ್ಬಿಬ್ಬರು ಮಹಿಳಾ ಸಿಬ್ಬಂದಿಯನ್ನು ಕೂರಿಸಿಕೊಂಡು ರತ್ನಾಕರ್ ಆಸ್ಪತ್ರೆಯಲ್ಲಿಯೇ ರಂಗಿನಾಟ ಆಡಿದ್ದಾನೆ.
ಸರ್ಕಾರಿ ವೈದ್ಯನಾಗಿರುವ ರತ್ನಾಕರ್ ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿದ್ದಾನೆ. ಒಂದು ವೇಳೆ ರತ್ನಾಕರ್ ಜೊತೆಗೆ ಸಹಕರಿಸದ ಸಿಬ್ಬಂದಿಯನ್ನು ಕೆಲಸದಿಂದ ತೆಗೆಸುವ ಅಥವಾ ಟ್ರಾನ್ಸ್‍ಫರ್ ಮಾಡಿಸುವ ಹೀಗೆ ಹಲವಾರು ರೀತಿಯಲ್ಲಿ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಕೇಳಿ ಬಂದಿದೆ.
ಈ ಭಯಕ್ಕೆ ಮಹಿಳಾ ಸಿಬ್ಬಂದಿ ಆತ ಹೇಳಿದಂತೆ ಕೇಳುತ್ತಿದ್ದರು.
ರತ್ನಾಕರ್ ಮಹಿಳಾ ಸಿಬ್ಬಂದಿ ಜೊತೆ ಆಗಾಗ ಟ್ರಿಪ್ ಹೋಗುತ್ತಿದ್ದ. ಈ ಸಂದರ್ಭದಲ್ಲೂ ಆತ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.
ರತ್ನಾಕರ ಕಿರುಕುಳದಿಂದ ನೊಂದ ಮಹಿಳೆಯರು ಆರೋಪಿ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
- ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
- ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು