ಮಾಜಿ ಸಚಿವ ಎ.ಮಂಜು ಕಾಂಗ್ರೆಸ್‌ಗೆ ಬಂದರೂ ನಾವು ಸೇರಿಸಿಕೊಳ್ಳಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಡಕ್ ಪ್ರತಿಕ್ರಿಯೆ ನೀಡಿದ್ದಾರೆ
ಇತ್ತೀಚೆಗಷ್ಟೇ ಎ.ಮಂಜು ಸಿದ್ದರಾಮಯ್ಯರನ್ನು ಭೇಟಿಯಾಗಿದ್ದರು. ಕಾಂಗ್ರೆಸ್‌ಗೆ ಮತ್ತೆ ಸೇರ್ಪಡೆ ಆಗುವ ಬಗ್ಗೆ ಚರ್ಚೆ ನಡೆಸಿದ್ದರು ಅಂತಾ ವರದಿಯಾಗಿತ್ತು.
ಈ ಕುರಿತಂತೆ ಮಾಧ್ಯಮಗಳ ಜೊತೆ ಪ್ರತಿಕ್ರಿಯಿಸಿದ ಸಿದ್ದು, ಎ.ಮಂಜು ಕಾಂಗ್ರೆಸ್ ಸೇರಲ್ಲ. ಕಾಂಗ್ರೆಸ್‌ಗೆ ಬರುವುದಾಗಿಯೂ ಕೇಳಿಲ್ಲ ಎಂದಿದ್ದಾರೆ. ಬಂದರೂ ನಾವು ಸೇರಿಸೋವುದಿಲ್ಲ ಎಂದರು
ಸಿಂಗಲ್ ವೋಟ್ ಹಾಕಲು ಹೇಳಿದ್ದೇನೆ :
ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಪರಿಷತ್ ಚುನಾವಣೆಯಲ್ಲಿ ನಮ್ಮ ಬೆಂಬಲಿತ ಮತದಾರರಿಗೆ ಸಿಂಗಲ್ ವೋಟ್ ಮಾಡಲು ಹೇಳಿದ್ದೇವೆ. ಎರಡನೇ ಪ್ರಾಶಸ್ತ್ಯ ಮತವನ್ನು ಯಾರಿಗೂ ಹಾಕಲ್ಲ. ನಾವು ಯಾರೊಂದಿಗೂ, ಯಾವ ಕ್ಷೇತ್ರದಲ್ಲೂ ಹೊಂದಾಣಿಕೆ ಮಾಡಿಕೊಳ್ಳಲ್ಲ ಎಂದು ಹೇಳಿದರು
ನಮ್ಮ ಬೆಂಬಲಿತರಿಗೆ ಸಿಂಗಲ್ ವೋಟ್ ಹಾಕಲು ಸೂಚನೆ ಕೊಟ್ಟಿದ್ದೇನೆ. ಬಿಜೆಪಿ- ಜೆಡಿಎಸ್ ನಡುವೆ ಒಳ ಒಪ್ಪಂದ ಇದ್ದೇ ಇದೆ. ಈ ಚುನಾವಣೆಯಲ್ಲಿ ಮಾತ್ರ ಅಲ್ಲ. ಇತ್ತೀಚೆಗೆ ನಡೆದ ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲೂ ಅವರಿಬ್ಬರೂ ಒಳ ಒಪ್ಪಂದ ಮಾಡಿಕೊಂಡೇ ಚುನಾವಣೆ ಮಾಡಿದ್ದಾರೆ ಎಂದು ಆರೋಪಿಸಿದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು