ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಡ್ರೀಮ್ ಪಾಜೆಕ್ಟ್ ಸಂಬಂಧಿಸಿದಂತೆ ಪೋಸ್ಟರ್‌ವೊಂದನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಹಂಚಿಕೊಂಡಿದ್ದಾರೆ.
ಪುನೀತ್ ಸಾವಿಗೂ ಮುನ್ನ ಅವರು ಅಭಿನಯಿಸಿದ್ದ ಗಂಧದ ಗುಡಿ ಡಾಕ್ಯುಮೆಂಟರಿ ಫಿಲ್ಮ್ ಅನ್ನು ದೊಡ್ಡದಾಗಿ ಅಭಿಮಾನಿಗಳ ಮುಂದೆ ಸ್ಕ್ರೀನ್ ಮೇಲೆ ತರುವ ಆಸೆ ಹೊಂದಿದ್ದರು.
ಆದರೆ ದುರದೃಷ್ಟವಶಾತ್ ಪುನೀತ್ ಇಂದು ನಮ್ಮೊಂದಿಗೆ ಇಲ್ಲ. ಆದರೂ ಪುನೀತ್ ಆಸೆಯಂತೆ ಗಂಧದ ಗುಡಿ ಡಾಕ್ಯುಮೆಂಟರಿ ತೆರೆಕಾಣಲಿದೆ.
ಡಾಕ್ಯುಮೆಂಟರಿ ಟೀಸರ್ ಡಿಸೆಂಬರ್ 6ರಂದು ರಿಲೀಸ್ ಆಗುತ್ತಿದೆ.ಈ ಕುರಿತಂತೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟರ್ ವೊಂದನ್ನು ಶೇರ್ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.
ಈ ಪೋಸ್ಟರ್‌ನಲ್ಲಿ ದಟ್ಟ ಕಾಡಿನ ಮಧ್ಯೆ ಪುನೀತ್ ಬೆನ್ನ ಹಿಂದೆ ಬ್ಯಾಗ್ ಹಾಕಿಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ.
ಡಿಸೆಂಬರ್ 1ರಂದು ಪುನೀತ್ ರಾಜ್‍ಕುಮಾರ್ ಮತ್ತು ಅಶ್ವಿನಿ ತಮ್ಮ 22ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳಬೇಕಾಗಿತ್ತು. ಆದರೆ, ದುರ್ವಿಧಿಯ ಲೆಕ್ಕಾಚಾರವೇ ಬೇರೆ ಆಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ