March 16, 2026

Newsnap Kannada

The World at your finger tips!

gas tankar

ಚಿತ್ರದುರ್ಗ ಬಳಿ ಭೀಕರ ಅಪಘಾತ : ಈರುಳ್ಳಿ ಲಾರಿಗೆ ಟ್ಯಾಂಕರ್ ಡಿಕ್ಕಿ – ನಾಲ್ವರ ಸಾವು

Spread the love

ಈರುಳ್ಳಿ ಸಾಗಿಸುತ್ತಿದ್ದ ನಿಂತಿದ್ದ ಲಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ಭೀಕರ ಅಪಘಾತದಲ್ಲಿ ಈರುಳ್ಳಿ ಲಾರಿಗೆ ಪಂಕ್ಚರ್ ಹಾಕುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರೋಣ ಮೂಲದ ಚಾಲಕ ಶರಣಪ್ಪ ಎಂದು ಗುರುತಿಸಲಾಗಿದೆ.

ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಾಟ ಮಾಡುವ ಸಂದರ್ಭದಲ್ಲಿ ಈ ದುರಂತ ನಡೆದಿದೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!