ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಗೆ ಹೈಕೋರ್ಟ್ ಹಸಿರು ನಿಶಾನೆ ನೀಡಿದೆ.
ನ್ಯಾಯಮೂರ್ತಿ ಕೃಷ್ಣ .ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಈಗಾಗಲೇ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಿದೆ ಈ ಹಂತದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ನಿರ್ದೇಶಿಸಲು ಸಾಧ್ಯವಿಲ್ಲ ಹೀಗಾಗಿ ಒಕ್ಕಲಿಗರ ಸಂಘದ ಚುನಾವಣೆಗೆ ನಡೆಸಬಹುದು ಎಂದು ತೀರ್ಪು ನೀಡಿದೆ.
ಒಕ್ಕಲಿಗರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಅರ್ಜಿ ಸೇರಿ ಸಲ್ಲಿಕೆಯಾಗಿದ್ದ 4 ರಿಟ್ಗಳನ್ನು ವಿಚಾರಣೆ ನಡೆಸಿದ ನ್ಯಾಯಪೀಠ ನಿಗದಿತ ವೇಳಾಪಟ್ಟಿ ಅನುಸಾರ ಚುನಾವಣೆ ನಡೆಯಬೇಕು.
11 ಕೋಟಿ ರು ಚುನಾವಣಾ ವೆಚ್ಚವನ್ನು ತಗ್ಗಿಸಲು ನಿರ್ದೇಶನ ನೀಡಲು ಹೈಕೋರ್ಟ್ ನಕಾರವೆತ್ತಿದೆ.ಇಂತಹ ವಿಚಾರದ ಬಗ್ಗೆ ಸಂಘದ ಪ್ರಾಜ್ಞರು ಹಾಗೂ ಹಿರಿಯರೇ ಗಮನಹರಿಸಬೇಕು. ಎಂದಿದೆ.
ಇನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವ ಸದಸ್ಯರ ಸದಸ್ಯತ್ವ ಸೇರ್ಪಡೆಗೆ ಸೇರಿಸಲು ಹೈಕೋರ್ಟ್ ನಿರಾಕರಿಸಿದೆ.ಚುನಾವಣಾ ವೆಚ್ಚದ ಎಲ್ಲ ಲೆಕ್ಕಪತ್ರಗಳನ್ನು ಚುನಾವಣಾಧಿಕಾರಿ ಹಾಗೂ ಸಂಘದ ಅಧಿಕಾರಿಗಳು ಕರಾರುವಕ್ಕಾಗಿ ದಾಖಲಿಸಬೇಕು. ಹೊಸದಾಗಿ ಅಸ್ತಿತ್ವಕ್ಕೆ ಬರುವ ಆಡಳಿತ ಮಂಡಳಿಯೇ ಇದನ್ನು ಪರಿಶೀಲಿಸಬೇಕು ಒಂದು ವೇಳೆ ಏನಾದರೂ ಎಡವಟ್ಟು ಮಾಡಿದ್ರೆ ಗಂಭೀರ ಕ್ರಮ ಕೈಗೊಳ್ಳಲಾಗುತ್ತೆ ಎಂದು ಕೋರ್ಟ್ ತಿಳಿಸಿದೆ.
2022ರ ಜನವರಿ 12 ರಂದು ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಯಲಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು