November 15, 2024

Newsnap Kannada

The World at your finger tips!

madhuswamy

ಕೇರಳದಿಂದ ತುಮಕೂರಿಗೆ ಬಂದವರ ಮೇಲೆ ಹೆಚ್ಚು ನಿಗಾ: ಮಾಧುಸ್ವಾಮಿ

Spread the love

ಓಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಗೆ ಕೇರಳದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದಸಚಿವ ಮಾಧುಸ್ವಾಮಿ, ಕೇರಳದಿಂದ ಬಂದವರನ್ನು ಮನೆಯಲ್ಲೇ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ. ಹೆಚ್ಚು ಪ್ರಕರಣಗಳು ಕಂಡು ಬಂದರೆ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಸೂಚಿಸಲಾಗಿದೆ ಎಂದರು

ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ತಾಲೂಕಾಸ್ಪತ್ರೆಯಲ್ಲೂ 500-600 ಆಕ್ಸಿಜನ್ ಸಾಂದ್ರಕಗಳಿವೆ. ಜೊತೆಗೆ ಪ್ರತಿ ತಾಲೂಕಿನಲ್ಲಿ 5-6 ಐಸಿಯು ಬೆಡ್ ಇದೆ ಎಂದರು.

ಈ ಬಾರಿ ಮಕ್ಕಳ ಪ್ರಕರಣ ಹೆಚ್ಚು ಕಂಡುಬರುವ ಸಾಧ್ಯತೆ ಇದೆ. ಹಾಗಾಗಿ 200 ಮಕ್ಕಳ ವೈದ್ಯರನ್ನು ಕರೆಸಿ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ. ಐಸಿಯು ಬೆಡ್ ಸೇರಿದಂತೆ ಎಲ್ಲ ರೀತಿಯ ಸೂಕ್ತ ಕ್ರಮ ಕೈಗೊಳ್ಳಲಾಗಿದೆಎಂದು ಹೇಳಿದರು

ಡಿ. 9 ರಂದು ಸಚಿವ ಸಂಪುಟ ತುರ್ತು ಸಭೆ ನಡೆಸಲಾಗುವುದು. ನೀತಿ ಸಂಹಿತೆ ಇರುವುದರಿಂದ ಜಿಲ್ಲೆಯಲ್ಲಿ ಸಚಿವರಿಂದ ಸಭೆ ನಡೆಸಲು ಆಗುತ್ತಿಲ್ಲ. ಹಾಗಾಗಿ ಕೋವಿಡ್ ಸಂಬಂಧಿಸಿದಂತೆ ಉಸ್ತುವಾರಿ ನೋಡಿಕೊಳ್ಳಲು ಕಷ್ಟವಾಗುತ್ತಿದೆ. ಇದರಿಂದಾಗಿ ಡಿ. 9ರಂದು ಸಚಿವ ಸಂಪುಟ ಸಭೆ ಕರೆದು ನಂತರ ನಾವು ಕಾರ್ಯೋನ್ಮುಖರಾಗುತ್ತೇವೆ ಎಂದರು.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಪ್ರತಿ ಕ್ರಿಯೆ ನೀಡಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕಷ್ಟ. ಆದರೆ ಉಳಿದ ಜಿಲ್ಲೆಗಳಲ್ಲಿ ದೇವೇಗೌಡರಲ್ಲಿ ಸಹಕಾರಕ್ಕಾಗಿ ಮನವಿ ಮಾಡಿದ್ದೇವೆ ಎಂದು ಹೇಳಿದರು.

Copyright © All rights reserved Newsnap | Newsever by AF themes.
error: Content is protected !!