ಓಮಿಕ್ರಾನ್ ಈಗ ಮಕ್ಕಳಿಗೂ ಬಾಧಿಸುತ್ತದೆ ನಿನ್ನೆ ಮಹಾರಾಷ್ಟ್ರದಲ್ಲಿ 3 ವರ್ಷದ ಮಗುವಿನಲ್ಲಿ ಕೊರೊನಾ ವೈರಸ್ ರೂಪಾಂತರಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ.
ಮಹಾರಾಷ್ಟ್ರ ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 3 ವರ್ಷದ ಮಗು ಸೇರಿದಂತೆ 7 ಮಂದಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದೆ. ದೇಶದಲ್ಲಿ ಓಮಿಕ್ರಾನ್ ಸೋಂಕು ಒಟ್ಟು ಪ್ರಕರಣಗಳ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.
ಸೋಂಕಿತ 7 ಮಂದಿ ಪೈಕಿ ಮೂವರು ಮುಂಬೈನವರಾಗಿದ್ದಾರೆ. ಇವರು ತಾಂಜೇನಿಯಾ, ಯುಕೆ, ದಕ್ಷಿಣ ಆಫ್ರಿಕಾದಿಂದ ಪ್ರಯಾಣ ಬೆಳೆಸಿದ್ದರು. ಇದರಿಂದಾಗಿ ಮುಂಬೈನಲ್ಲಿ ಈಗ ಒಟ್ಟು 5 ಓಮಿಕ್ರಾನ್ ಪ್ರಕರಣಗಳಿವೆ. ಒಟ್ಟು ಸೋಂಕಿತರ ಪೈಕಿ ನಾಲ್ವರಲ್ಲಿ ಯಾವುದೇ ರೋಗಲಕ್ಷಣಗಳಿರಲಿಲ್ಲ.
ವಿಶ್ವದಲ್ಲಿ ನವೆಂಬರ್ 24ರ ಸಂದರ್ಭದಲ್ಲಿ ಕೇವಲ ಎರಡು ದೇಶಗಳಲ್ಲಿ ಮಾತ್ರ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದವು. ಈಗ ಆ ಸಂಖ್ಯೆ 59 ದೇಶಗಳಿಗೆ ವಿಸ್ತರಿಸಿದೆ. ಇಷ್ಟೂ ದೇಶಗಳಲ್ಲಿ ಈವರೆಗೆ ಓಮಿಕ್ರಾನ್ ಸೋಂಕಿತ ಒಟ್ಟು 2,936 ಪ್ರಕರಣಗಳು ವರದಿಯಾಗಿವೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ