ಅನಾರೋಗ್ಯ ಪೀಡಿತ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ವೇಳೆ ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮ ಆ ಮಹಿಳೆ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ಸಮೀಪದ ಗ್ರಾಮವೊಂದರಲ್ಲಿ ಜರುಗಿದೆ.
ಪಾರ್ವತಿ (47) ಮೃತಪಟ್ಟ ಮಹಿಳೆ. ಕಳೆದ ಕೆಲದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಹೀಗಾಗಿ ದೇವರ ಮೊರೆ ಹೋಗಿದ್ದರು.
ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ಪೂಜಾರಿ ತಿಳಿಸಿದ್ದಾರೆ.
ಪೂಜೆ ಮಾಡಿ ತಲೆನೋವು ಗುಣಪಡಿಸುವುದಾಗಿ ಹೇಳಿ ಮಹಿಳೆ ತಲೆಗೆ ಪೂಜಾರಿ ಬೆತ್ತದಿಂದ ಹೊಡೆದಿದ್ದಾರೆ.
ಹಿರಿಯಾಪಟ್ಟಣದಮ್ಮ ದೇವರ ಪೂಜಾರಿಯು ಬೆತ್ತದಿಂದ ತಲೆಗೆ ಹೊಡೆದ ಪರಿಣಾಮ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಆಕೆ ಚಿಕಿತ್ಸೆ ಫಲಕಾರಿಯಾಗದೇ ಹಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪೂಜಾರಿ ನಾಪತ್ತೆಯಾಗಿದ್ದಾನೆ ಶ್ರವಣಬೆಳಗೊಳ ಪೋಲಿಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ