ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್ ಕಾರ್ಯಕರ್ತರು ಮಹಾಮೇಳವನ್ನು ಆಯೋಜಿಸಿ ಉದ್ಧಟತನ ಮೆರೆದು, ಬೆಳಗಾವಿ ಪಾಲಿಕೆ ಸಿಬ್ಬಂದಿಗೆ ಎಂಇಎಸ್ನ ಕೆಲವು ಪುಂಡರು ಆವಾಜ್ ಹಾಕಿರುವ ಘಟನೆ ವಿಕೋಪಕ್ಕೆ ತಿರುಗಿದೆ
ಈ ಘಟನೆಯಿಂದ ಕೆರಳಿದ ಕರ್ನಾಟಕ ನವ ನಿರ್ಮಾಣ ಪಡೆಯ ಕಾರ್ಯಕರ್ತರು ಎಂಇಎಸ್ ಮುಖಂಡರಿಗೆ ಮಸಿ ಬಳಿದಿದ್ದಾರೆ.
ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಎಂಇಎಸ್ ಕಾರ್ಯಕರ್ತರು ಹಾಗೂ ಕರ್ನಾಟಕ ನವ ನಿರ್ಮಾಣ ಪಡೆ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
ಆಗ ಆಕ್ರೋಶಗೊಂಡ ಕರ್ನಾಟಕ ನವ ನಿರ್ಮಾಣ ಪಡೆಯ ಕಾರ್ಯಕರ್ತರು, ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದು ಸೇಡು ತೀರಿಸಿಕೊಂಡಿದ್ದಾರೆ.
ಎಂಇಎಸ್ ಕಾರ್ಯಕರ್ತರು ಅನಧಿಕೃತವಾಗಿ ವೇದಿಕೆ ನಿರ್ಮಾಣ ಮಾಡಿದ್ದರು. ಇದನ್ನು ಪಾಲಿಕೆ ಸಿಬ್ಬಂದಿ ತೆರವು ಮಾಡಲು ಮುಂದೆ ಬಂದಾಗ ಅವಾಜ್ ಹಾಕಿದ್ದಾರೆ ಎನ್ನಲಾಗಿದೆ.
ನಾಳೆ ಬೆಳಗಾವಿ ಬಂದ್ ?
ಸದ್ಯ ಅಲ್ಲಿನ ಪರಿಸ್ಥಿತಿ ಕೊಂಚ ವಿಷಮಗೊಂಡಿದೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ಕೆಲವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತ ಮಸಿ ಬಳಿಯುತ್ತಿದ್ದಂತೆ ಎಂಇಎಸ್ ಮುಖಂಡರು ನಾಳೆ ಬೆಳಗಾವಿ ಬಂದ್ಗೆ ಕರೆ ನೀಡಿದ್ದಾರೆ.
ಎಂಇಎಸ್ ಮಾಜಿ ಶಾಸಕ ಮನೋಹರ್ ಕಿಣೇಕರ್ ಬಂದ್ಗೆ ಕರೆ ನೀಡಿದ್ದಾರೆ. ಮಸಿ ಬಳಿದಿರುವ ಘಟನೆಯ ಬಗ್ಗೆ ಮಹಾರಾಷ್ಟ್ರ ನಾಯಕರ ಗಮನಕ್ಕೆ ತರುತ್ತೇನೆ. ಶಿವಸೇನೆ, ಎನ್ಸಿಪಿ ಹಾಗೂ ಕಾಂಗ್ರೆಸ್ ನಾಯಕರ ಗಮನಕ್ಕೂ ತರುತ್ತೇನೆ. ಅಲ್ಲದೇ ನಾಳಿನ ಬಂದ್ ಯಶಸ್ವಿಯಾಗುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ