ಹೆಲಿಕಾಪ್ಟರ್ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಿಸದೇ ನಿಧನರಾದರು
ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ವರುಣ್ ಸಿಂಗ್ಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ಸಿಡಿಎಸ್ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನಗೊಂಡಿತ್ತು. ಪರಿಣಾಮ ಹೆಲಿಕಾಪ್ಟರ್ನಲ್ಲಿದ್ದ 13 ಮಂದಿ ಅಂದೇ ಸಾವನ್ನಪ್ಪಿದ್ದರು. ಈ ಅಪಘಾತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನ ತಮಿಳುನಾಡಿನ ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ಸೇನೆ ತಿಳಿಸಿದೆ. ಹೀಗಾಗಿ ಬಿಪಿನ್ ರಾವತ್ ಬಲಿ ಪಡೆದ ಹೆಲಿಕಾಪ್ಟರ್ ದುರಂತದಲ್ಲಿದ್ದ ಎಲ್ಲಾ 14 ಮಂದಿಯೂ ಸಾವನ್ನಪ್ಪಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ