February 21, 2026

Newsnap Kannada

The World at your finger tips!

sangolli rayanna

ಬೆಳಗಾವಿಯಲ್ಲಿ ರಾಯಣ್ಣನ ಪುತ್ಥಳಿ ಧ್ವಂಸ ಮಾಡಿ ವಿಕೃತಿ ಮೆರದ ಎಂಇಎಸ್ ಪುಂಡಾಟ

Spread the love

ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳಿಯಲಾಗಿದೆ ಎಂಬ ಆರೋಪ ಕೇಳಿಬಂದ‌ ನಂತರ ಈ ಘಟನೆ ಖಂಡಿಸಿ ಹಿಂದೂಪರ ಸಂಘಟನೆಳು ಪ್ರತಿಭಟನೆ ನಡೆಸಿದವು. ಈ ವೇಳೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ನಡೆಸಿ, ಸಂಗೊಳ್ಳಿ ರಾಯಣ್ಣ ಪುತ್ಥಳಿ ಬೀಳಿಸಿ ವಿಕೃತಿ ಮೆರೆದಿದ್ದಾರೆ.

ಬೆಳಗಾವಿಯ ಕನಕದಾಸ ಕಾಲೋನಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಬೀಳಿಸಿ, ಖಡ್ಗ, ಗುರಾಣಿ ಬೇರೆ ಬೇರೆ ಮಾಡಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.

ಈ ಘಟನೆ ಸಂಬಂಧ ಟಳಕವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಶಿವಾಜಿನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳಿದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ನಡುವೆ ಸರ್ಕಾರಿ ಬಸ್ ಮೇಲೆ ಕಲ್ಲೂತೂರಾಟ ನಡೆಸಲಾಗಿದೆ. 20 ಕ್ಕೂ ಹೆಚ್ಚು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ, ಅದರಲ್ಲಿ 12 ಸರ್ಕಾರಿ ವಾಹನಗಳನ್ನು ಜಖಂ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

error: Content is protected !!