February 22, 2026

Newsnap Kannada

The World at your finger tips!

mother daughter

ಮಗಳೊಂದಿಗೆ ಕಾವೇರಿ ನದಿಗೆ ಹಾರಿ ತಾಯಿ ಆತ್ಮಹತ್ಯೆ

Spread the love

ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ, ತನ್ನ ಮಗಳೊಂದಿಗೆ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ.

ಮೈಸೂರಿನ ನಿವಾಸಿ ಭಾರ್ಗವಿ (31), ಮಗಳು ದೀಕ್ಷಾ (03) ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಂಡ ಹೆಂಡತಿಯ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆ ಮಗಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ

ಮೃತ ಭಾರ್ಗವಿಯನ್ನು ಪಾಂಡವಪುರ ತಾಲೂಕಿನ ಪ್ರದೀಪ್ ಕುಮಾರ್ ಎಂಬುವರಿಗೆ 5 ವರ್ಷದ ಹಿಂದೆ ಮದುವೆ ಮಾಡಿಕೊಡಲಾಗಿತ್ತು.

ಈ ದಂಪತಿ ಮೈಸೂರಿನ ಹೂಟಗಳ್ಳಿಯಲ್ಲಿ ಸದ್ಯ ವಾಸವಿದ್ದರು ಎಂದು ತಿಳಿದುಬಂದಿದೆ.

ಶ್ರೀರಂಗಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!