February 22, 2026

Newsnap Kannada

The World at your finger tips!

metro ns

Application Invitation for Recruitment of Various 236 Posts in Our Metro ನಮ್ಮ ಮೆಟ್ರೋದಲ್ಲಿ ವಿವಿಧ 236 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿ ಡಿ 20 ರಿಂದ ಬೆಳಿಗ್ಗೆ 5 ಗಂಟೆಯಿಂದಲೇ ಮೆಟ್ರೋ ಸಂಚಾರ ಆರಂಭ

Spread the love

ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಕಡಿಮೆಯಾಗಿರುವ ಹಿನ್ನೆಲೆನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಬೆಂಗಳೂರು
ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.

ಡಿ 20 ರಿಂದ 6 ರ ಬದಲಾಗಿ 5 ಗಂಟೆಯಿಂದಲೇ ಮೆಟ್ರೋ ಕಾರ್ಯಾರಂಭ ಮಾಡಲಿದೆ

ಡಿ.20ರ ಸೋಮವಾರದಿಂದ ಈ ಆದೇಶ ಜಾರಿಗೆ ಬರಲಿದೆ. ಸೋಮವಾರದಿಂದ ಶನಿವಾರದವರೆಗೂ ಬೆಳಿಗ್ಗೆ 5 ಗಂಟೆಗೆ ಮೆಟ್ರೋ ಸಂಚಾರ ಆರಂಭವಾಗಲಿದ್ದು, ಭಾನುವಾರದಂದು ಮಾತ್ರ ಬೆಳಿಗ್ಗೆ 7 ಗಂಟೆಗೆ ರೈಲು ಸಂಚಾರ ಶುರುವಾಗಲಿದೆ ಎಂದು ಪ್ರಾಧಿಕಾರ ಮಾಹಿತಿ ನೀಡಿದೆ.

ಕೋವಿಡ್​ ಸೋಂಕಿನ ಪ್ರಮಾಣದಲ್ಲಿ ಗಣನೀಯವಾಗಿ ಇಳಿಮುಖವಾಗುತ್ತಿದ್ದರಿಂದ ಪ್ರಯಾಣಿಕರಿಂದ ಬೇಡಿಕೆ ಹೆಚ್ಚಿದೆ. ಹೀಗಾಗಿ ಸಾಮಾನ್ಯವಾಗಿ ಬೆಳಿಗ್ಗೆ 6 ಗಂಟೆಯಿಂದ ಕಾರ್ಯಾರಂಭವಾಗುತ್ತಿದ್ದ, ಮೆಟ್ರೋ ಸೇವೆಯನ್ನ ಒಂದು ಗಂಟೆ ಮುಂಚಿತವಾಗಿ ಆರಂಭಿಸಲಾಗುತ್ತದೆ ಎಂದು ತಿಳಿಸಿದೆ.

error: Content is protected !!