ಕುಡಿದ ಮತ್ತಿನಲ್ಲಿ ಮನಬಂದಂತೆ ಲಾರಿ ಚಲಾಯಿಸಿದ ಚಾಲಕ, ಅಪಘಾತದ ನಂತರವೂ ಲಾರಿ ನಿಲ್ಲಿಸದೆ ವೇಗವಾಗಿ ಹೋಗಿದ್ದಾನೆ. ಇದರಿಂದ ಸುಮಾರು ಎರಡು ಕಿಲೋಮೀಟರ್ ದೂರದವರೆಗೂ ಬೈಕ್ ಅನ್ನು ಲಾರಿ ಎಳೆದುಕೊಂಡು ಹೋಗಿದೆ.
ಇದರಿಂದ ಲಾರಿಯ ಟಯರ್ ನಡಿ ಸಿಲುಕಿ ಸುಮಾರು ಎರಡು ಕಿಲೋಮೀಟರ್ ದೂರದವರೆಗೂ ಸಾಗಿದ ಮಗುವಿನ ದೇಹ ಛಿದ್ರಛಿದ್ರವಾಗಿದೆ. ಘಟನೆಯಿಂದ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.
ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿ ಸರಣಿ ಅಪಘಾತ ಮಾಡಿದ ಚಾಲಕನಿಂದಾಗಿ ಇಬ್ಬರು ಮಕ್ಕಳ ಸಹಿತ ತಾಯಿ ದುರಂತ ಸಾವು ಕಂಡಿದ್ದಾರೆ.
ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಅವಳಿ ಮಕ್ಕಳಾದ ಪ್ರಣತಿ (3), ಪ್ರಣವ್(3) ಮತ್ತು ಜ್ಯೋತಿ ಮೃತರು.
.ತಂದೆ ಶಿವಾನಂದ್ ಹಾಗೂ ತಾಯಿ ಜ್ಯೋತಿ ಜೊತೆ ಮಕ್ಕಳು ಬೈಕಿನಲ್ಲಿ ಹೋಗುತ್ತಿದ್ದರು. ಈ ವೇಳೆ ಸುಮಾರು ನಾಲ್ಕು ಬೈಕ್ ಗಳಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ, ಎರಡು ಪುಟ್ಟ ಮಕ್ಕಳಿದ್ದ ಬೈಕ್‍ಗೂ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಮಕ್ಕಳಿಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ತಾಯಿ ಕೂಡ ಸಾವನ್ನಪ್ಪಿದ್ದಾರೆ ಗಂಭೀರವಾಗಿ ಗಾಯಗೊಂಡಿರುವ ಮಕ್ಕಳ ತಂದೆ ಶಿವಾನಂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ