‘ವಿರೋಧ ಪಕ್ಷದ ನಾಯಕರು ಏನಾದರು ಹೇಳಿದರೆ ಅದು ವೇದವಾಕ್ಯವಲ್ಲ‘ ಎಂದು ಮಾಜಿ ಸಚಿವ, ಹೆಚ್. ವಿಶ್ವನಾಥ್ ಅಭಿಪ್ರಾಯಪಟ್ಟರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಯ ಮೇಲೆ ನಡೆದ ಸಿಬಿಐ ದಾಳಿಯ ಬಗ್ಗೆ ಮಾಧ್ಯಮಮಿತ್ರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ‘ದಾಳಿಯ ಬಗೆಗೆ ನನಗೆ ಸರಿಯಾದ ಮಾಹಿತಿ ಇಲ್ಲ. ಹಾಗಾಗಿ ಅದರ ಬಗ್ಗೆ ಕಾಮೆಂಟ್ ಮಾಡುವದಿಲ್ಲ. ಆದರೆ ಎಲ್ಲವನ್ನು ಮೀರಿ ಗೆದ್ದು ಬರುವ ಶಕ್ತಿ ಡಿಕೆಶಿ ಅವರಿಗಿದೆ‘ ಎಂದರು.
ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಸಿಬಿಐ ದಾಳಿಯನ್ನು ರಾಜಕೀಯ ಪ್ರೇರಿತ. ಇದು ಆಡಳಿತ ಪಕ್ಷದ ನೈತಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಹೇಳಿಕೆ ನೀಡಿದ್ದರು.
ಸಿದ್ದರಾಮಯ್ಯ ಅವರ ಹೇಳಿಕೆಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಅವರು ‘ವಿರೋಧ ಪಕ್ಷದ ನಾಯಕರು ಹೇಳಿದ ತಕ್ಷಣ ಅದು ವೇದ ವಾಕ್ಯ ಅಲ್ಲ. ದೇಶದ ಆರ್ಥಿಕ ಪರಿಸ್ಥಿತಿ ಮತ್ತು ಆರ್ಥಿಕ ಅಪರಾಧಗಳ ಮೇಲೆ ಕಣ್ಣಿಡಲು ಒಂದು ಇಲಾಖೆ ಇದೆ. ಅದು ಕಾಲ ಕಾಲಕ್ಕೆ ಎಲ್ಲವನ್ನೂ ನಡೆಸುತ್ತಿರುತ್ತದೆ. ಡಿಕೆಶಿ ಗೆದ್ದು ಬರುತ್ತಾರೆಂಬ ವಿಶ್ವಾಸ ನನಗಿದೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಲಿದ್ದೇವೆ’ ಎಂದರು.
More Stories
ಬಿಜೆಪಿ ಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆ: ಹೈಕೋರ್ಟ್ ತಕ್ಷಣ ಬಿಡುಗಡೆಗೆ ಆದೇಶ
ಯೂಟ್ಯೂಬ್ ನೋಡಿ ಬೈಕ್ ಕಳವು ತರಬೇತಿ: 13 ಲಕ್ಷ ಮೌಲ್ಯದ 20 ಬೈಕ್ಗಳ ಕಳ್ಳತನ
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ