ಚಾರ್ಜ್ ಶೀಟ್ ಹಾಕಲು 80 ಸಾವಿರ ರು ಲಂಚ ಪಡೆದ ಆರೋಪದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಎಫ್‌ಐಆರ್ ದಾಖಲಾದ ಘಟನೆ ಬೆಂಗಳೂರಿನಲ್ಲಿ ಜರುಗಿದೆ
ಇನ್ಸ್ ಪೆಕ್ಟರ್ ಜಯರಾಜ್ ಹಾಗೂ ಎಎಸ್‌ಐ ಶಿವಕುಮಾರ್ ಆರೋಪಿಗಳು. ಜಯರಾಜ್ ಈ ಹಿಂದೆ ಕೆಆರ್ ಪುರಂ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು. ಸದ್ಯ ಸಿಐಡಿಯಲ್ಲಿ ಇನ್ಸ್ ಪೆಕ್ಟರ್ ಜಯರಾಜ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕೌಟುಂಬಿಕ ಕಲಹದಲ್ಲಿ ಪತಿ ವಿರುದ್ಧ ಪತ್ನಿ ದೂರು ದಾಖಲಿಸಿದ್ದರು. ಪತ್ನಿಯ ದೂರಿನನ್ವಯ ಗಂಡ ಸಂಜು ರಾಜನ್‌ನನ್ನು ಕೆಆರ್ ಪುರಂ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು.
ಬಳಿಕ ಜಾಮೀನು ಪಡೆದು ಸಂಜು ರಾಜನ್ ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ
ಪ್ರತಿವಾರ ಠಾಣೆಗೆ ಆಗಮಿಸಿ ಸಹಿ ಮಾಡಲು 500 ರಿಂದ 10 ಸಾವಿರದವರಗೆ ಪೊಲೀಸರು ಲಂಚ ಪಡೆಯುತ್ತಿದ್ದರು. ಬೇಗ ಚಾರ್ಜ್ ಶೀಟ್ ಮಾಡಲು 80 ಸಾವಿರ ರೂ. ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಸಕ್ಷಮ ಪ್ರಾಧಿಕಾರದ ಅನುಮತಿ ಮೇರೆಗೆ ಇನ್ಸ್ಪೆಕ್ಟರ್ ಜಯರಾಜ್ ಹಾಗೂ ಎಎಸ್‌ಐ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿ ಎಸಿಬಿ ತನಿಖೆ ನಡೆಸುತ್ತಿದ್ದಾರೆ.
- ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
More Stories
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ