January 28, 2026

Newsnap Kannada

The World at your finger tips!

c m legpain

ಸಿಎಂ ಬೊಮ್ಮಾಯಿ ಮಂಡಿ ನೋವಿಗೆ ಮೈಸೂರು ನಾಟಿ ವೈದ್ಯರಿಂದ ಚಿಕಿತ್ಸೆ

Spread the love

ಸಿಎಂ ಬಸವರಾಜ ಬೊಮ್ಮಾಯಿ ಅವರ ಮಂಡಿ ನೋವು ಸಮಸ್ಯೆಗೆ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳದೇ ನಾಟಿ ವೈದ್ಯರಿಂದಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಹಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನಾಟಿ ವೈದ್ಯರಾಗಿರುವ ಮೈಸೂರಿನ ಲೋಕೇಶ್ ಟೆಕಲ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಮುಕ್ತಾಯದ ಬೆನ್ನಲ್ಲೇ ಸಿಎಂ ಚಿಕಿತ್ಸೆ ತೆಗೆದುಕೊಳ್ಳಲು ಆರಂಭ ಮಾಡಿದ್ದಾರೆ.

ಮೈಸೂರಿನಿಂದ ಲೋಕೇಶ್ ರನ್ನು ಬೆಳಗಾವಿಗೆ ಕರೆಯಿಸಿಕೊಂಡಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು, ಸಿಎಂ ಅವರ ಚಿಕಿತ್ಸೆ ಕಾರ್ಯ ಬಗ್ಗೆ ನೋಡಿಕೊಳ್ಳುತ್ತಿದ್ದಾರೆ. ಇನ್ನು ಮೂಳೆಗಳಿಗೆ ಕ್ಯಾಲ್ಸಿಯಂ ಹೆಚ್ಚು ಅವಶ್ಯಕತೆ ಇರೋ ಕಾರಣ ಔಷಧ ಜೊತೆಗೆ ನಿತ್ಯ ಎರಡು ಬಾರಿ ಮೇಕೆ ಹಾಲು ಕುಡಿಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಂಡಿ ನೋವಿನ ಚಿಕಿತ್ಸೆಗಾಗಿ ಸಿಎಂ ವಿದೇಶಕ್ಕೆ ತೆರಳಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದ ಸುದ್ದಿ ಸದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಮಾತು ಕೂಡ ಕೇಳಿ ಬಂದಿತ್ತು. ಸದ್ಯ ಬೊಮ್ಮಾಯಿ ಅವರು ವಿದೇಶಕ್ಕೆ ತೆರಳದೆ ನಾಟಿ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

error: Content is protected !!