ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ವುಡ್‌ಲ್ಯಾಂಡ್ಸ್ ನರ್ಸಿಂಗ್ ಹೋಮ್‌ಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.
ವೃತ್ತಿಪರ ಕೆಲಸದ ನಿಮಿತ್ತ ಗಂಗೂಲಿ ಹಲವೆಡೆ ಪ್ರವಾಸ ಕೈಗೊಂಡಿದ್ದರು. ಮುಂಜಾಗ್ರತೆ ಕ್ರಮವಾಗಿ ಆಸ್ಪತ್ರೆಯಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ.
ಗಂಗೂಲಿ ಅನಾರೋಗ್ಯದಿಂದಾಗಿ ಈ ವರ್ಷದಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿಯಲ್ಲಿ ಗಂಗೂಲಿ ಎದೆನೋವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಒಮ್ಮೆ ಹೃದಯಾಘಾತ ಕೂಡ ಆಗಿ ಚಿಕಿತ್ಸೆ ಪಡೆದುಕೊಂಡಿದ್ದರು.
ನಿನ್ನೆ ರಾತ್ರಿ ಅವರನ್ನು ವುಡ್‌ಲ್ಯಾಂಡ್ಸ್ ನರ್ಸಿಂಗ್ ಹೋಮ್‌ಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಲಾಗಿದೆ. ಔಷಧೋಪಚಾರ ನೀಡಲಾಗಿದೆ, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ
259 ರನ್ ಗಳಿಗೆ ನ್ಯೂಜಿಲೆಂಡ್ ಆಲ್ ಔಟ್ : ಸೇಡು ತೀರಿಸಿಕೊಳ್ಳುವ ತವಕದಲ್ಲಿ ಭಾರತ