ಮೇಕೆದಾಟು ಅಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಜನವರಿ 25ಕ್ಕೆ ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸುವುದಾಗಿ ನ್ಯಾ.ಎ.ಎಂ ಖಾನ್ವಿಲ್ಕರ್ ನೇತೃತ್ವದ ದ್ವಿ ಸದಸ್ಯ ಪೀಠ ಹೇಳಿದೆ.
ಮೇಕೆದಾಟು ಆಣೆಕಟ್ಟು ನಿರ್ಮಾಣ ವಿಚಾರವಾಗಿ ದೆಹಲಿಯ ರಾಷ್ಟ್ರೀಯ ಹಸಿರು ನ್ಯಾಯಧೀಕರಣ ನೀಡಿದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿತ್ತು
ಈ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಕೋರ್ಟ್ ಮೂಲ ಅರ್ಜಿಯೊಂದಿಗೆ ವಿಚಾರಣೆ ನಡೆಸುವುದಾಗಿ ಹೇಳಿದೆ.
ಮೇಕೆದಾಟು ಅಣೆಕಟ್ಟು ನಿರ್ಮಾಣ ಪ್ರದೇಶದಲ್ಲಿ ಈಗಾಗಲೇ ಕಾಮಗಾರಿ ಆರಂಭವಾಗಿದೆ. ಇದು ಪರಿಸರದ ಮೇಲೆ ಪರಿಣಾಮ ಬೀರಲಿದೆ ಎಂದು ತಮಿಳುನಾಡು ಮಾಧ್ಯಮಗಳು ವರದಿ ಮಾಡಿದ್ದವು.
ಈ ವರದಿ ಆಧರಿಸಿ ಚೆನೈನಲ್ಲಿರುವ ದಕ್ಷಿಣ ಹಸಿರು ನ್ಯಾಯಧೀಕರಣ ಸ್ವಯಂ ದೂರು ದಾಖಲಿಸಿಕೊಂಡಿತ್ತು.
ತಮಿಳುನಾಡು ಸರ್ಕಾರ ಸಲ್ಲಿಸಿದ ಮಾಹಿತಿಯೊಂದಿಗೆ ವಿಚಾರಣೆ ನಡೆಸಿದ ಕೋರ್ಟ್ ಸ್ಥಳ ಪರಿಶೀಲನೆಗಾಗಿ ಸಮಿತಿಯೊಂದನ್ನು ರಚನೆ ಮಾಡಿತ್ತು.
ಆದರೆ ಕರ್ನಾಟಕದ ಅಭಿಪ್ರಾಯ ಕೇಳದೆ ರಚಿಸಿದ್ದ ಸಮಿತಿಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿ ದೆಹಲಿಯ ಹಸಿರು ನ್ಯಾಯಧೀಕರಣಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ